ಅನರ್ಹಗೊಂಡ ಮೂವರು ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ ಜೆಡಿಎಸ್

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ನ ಅನರ್ಹಗೊಂಡ ಮೂವರು ಶಾಸಕರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಅನರ್ಹಗೊಂಡ ಮೂವರು ಶಾಸಕರು
ಅನರ್ಹಗೊಂಡ ಮೂವರು ಶಾಸಕರು
Updated on
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ನ ಅನರ್ಹಗೊಂಡ ಮೂವರು ಶಾಸಕರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಹೆಚ್ ವಿಶ್ವನಾಥ್, ಗೋಪಾಲಯ್ಯ ಹಾಗೂ ನಾರಾಯಣಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಹೆಚ್ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯ ಈ ಮೂವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಮೂಲ ಕಾರಣಕರ್ತರಾಗಿದ್ದರು. ಬಳಿಕ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು.
ನಿನ್ನೆಯಷ್ಟೇ ಕಾಂಗ್ರೆಸ್ 14 ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿತ್ತು. ಇದರ ಬೆನ್ನಲ್ಲೇ ಜೆಡಿಎಸ್ ಸಹ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com