ಸಿಎಂ ಗ್ರಾಮ ವಾಸ್ಯವ್ಯ ಮತ್ತೊಂದು ಗಿಮಿಕ್: ಕುಮಾರಸ್ವಾಮಿಗೆ ಬಿಜೆಪಿ ಟಾಂಗ್

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಲು ಮುಂದಾಗಿದ್ದಾರೆ.
ಜೂನ್ 2ನೇ ವಾರದಿಂದ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಅವರು ಕೆಲವೊಂದು ಬದಲಾವಣೆ ಮಾಡಿಕೊಳ್ಳಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ. ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ ಎಚ್.ಡಿ.ಕುಮಾರಸ್ವಾಮಿ ಗ್ರಾಮ ಪಂಚಾಯಿತಿ ಇಲ್ಲವೇ ಹೋಬಳಿ ಮಟ್ಟದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. 
ಒಂದು ತಿಂಗಳಿನಲ್ಲಿ ಕನಿಷ್ಠ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಈ ಕುರಿತು ಅಂತಿಮ ಯೋಜನೆ ತಯಾರು ಮಾಡುತ್ತಿದೆ.
ಆದರೆ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದೆ, ಇಉದೊಂದು ಗಿಮಿಕ್ ಎಂದು ಲೇವಡಿ ಮಾಡಿದೆ, ಸಮ್ಮಿಶ್ರ ಸರ್ಕಾರದಗ ವೈಫಲ್ಯಗಳನ್ನು ಮುಚ್ಚಿ ಹಾಕಲು ಕುಮಾರಸ್ವಾಮಿ ಅವರ ಮತ್ತೊಂದು ಡ್ರಾಮಾ ಎಂದು ವ್ಯಂಗ್ಯವಾಡಿದೆ, 
ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ಗ್ರಾಮ ವಾಸ್ತವ್ಯ ನೆರವಾಗುತ್ತದೆ. ಶೀಘ್ರದಲ್ಲೇ ಗ್ರಾಮ ವಾಸ್ತವ್ಯ ಪ್ರಾರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 
ಸರಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್‌ ಮಾಡಿದ್ದು, ಯಾವ ರೀತಿಯಲ್ಲಿ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. 
ಇನ್ನೂ ಸಿಎಂ ಕುಮಾರಸ್ವಾಮಿ ನಡೆಯನ್ನು ಸ್ವಾಗತಿಸಿರುವ ನೆಟ್ಟಿಗರು ಉತ್ತರ ಕರ್ನಾಟಕದಿಂದ ಆರಂಭಿಸುವಂತೆ ಮನವಿ ಮಾಡಿದ್ದಾರೆ. 2006ರ ಕುಮಾರಸ್ವಾಮಿ ಆಡಳಿತ ಮರುಕಳಿಸಲಿ ಎಂದು ಕೆಲವು ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com