ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ: ಸದ್ಯಕ್ಕೆ ಸರ್ಕಾರಕ್ಕೆ ತೊಂದರೆಯಿಲ್ಲ; ನಿಖಿಲ್ ಹೇಳಿಕೆ ವಿಡಿಯೋ ವೈರಲ್

ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮೈತ್ರಿ ಸರ್ಕಾರ ಕಂಪ್ಲೀಟ್ ಆಗುತ್ತೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗ್ತೀರ. ಒಳಗಡೆ ಏನು ..
ನಿಖಿಲ್ ಕುಮಾರ್
ನಿಖಿಲ್ ಕುಮಾರ್
ಬೆಂಗಳೂರು:  ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮೈತ್ರಿ ಸರ್ಕಾರ ಕಂಪ್ಲೀಟ್ ಆಗುತ್ತೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗ್ತೀರ. ಒಳಗಡೆ ಏನು ಅನ್ನೋದು ನಮಗೆ ಗೊತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರಿಗೆ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಜೆಡಿಎಸ್ ಕಾರ್ಯಕರ್ತರ ಜೊತೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ನಾಲ್ಕು ವರ್ಷ ಸರ್ಕಾರ ನಡೆಸುತ್ತೇವೆ, ಮುಂದಿನ ತಿಂಗಳಿಂದಲೇ ಶುರು ಮಾಡಿ. ಒಂದು ವರ್ಷಕ್ಕೆ ಬರುತ್ತೋ, ಎರಡು ವರ್ಷಕ್ಕೆ ಬರುತ್ತೋ, ಮೂರು ವರ್ಷಕ್ಕೆ ಬರುತ್ತೋ ಗೊತ್ತಿಲ್ಲ, ಜೆಡಿಎಸ್ ಕಾರ್ಯಕರ್ತರು ರೆಡಿಯಿರಬೇಕು ಎಂದು ತಿಳಿಸಿದ್ದಾರೆ, 
ಸರ್ಕಾರ ನಡೆಯುತ್ತೋ ಇಲ್ಲವೋ ಎಂಬ ಬಗ್ಗೆ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರ ಜೊತೆ ಚರ್ಚಿಸಿರುವ ವಿಡಿಯೋ ಇದಾಗಿದ್ದು, ಸುನೀಲ್ ಗೌಡ ದಂಡಿಗಾನಹಳ್ಳಿ ಎಂಬುವವರು ತಮ್ಮ ಫೇಸ್​ಬುಕ್​ನಲ್ಲಿ  ಸುಮಾರು 42 ಸೆಕೆಂಡ್​ಗಳ ಕಾಲ ಮಾತನಾಡಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ.
ಒಮ್ಮೆ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಆತ್ಮವಿಶ್ವಾಸದಿಂದ ಮಾತನಾಡಿದ್ದಾರೆ. ನಂತರ ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ, ಜೆಡಿಎಸ್ ಕಾರ್ಯಕರ್ತರು ತಯಾರಾಗಿರಿ ಎಂಬರ್ಥದಲ್ಲಿ ಮಾತನಾಡಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com