ಮೈತ್ರಿ ಸರ್ಕಾರ ಬೇಡ ಎಂದಿದ್ದೆ: ಸಮ್ಮಿಶ್ರ ಸರ್ಕಾರ ರಚನೆಯ ರಹಸ್ಯ ಬಹಿರಂಗಗೊಳಿಸಿದ ದೇವೇಗೌಡ

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡುವುದು ಬೇಡ ಎಂದು ನಾನು ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒತ್ತಾಯದ ಮೇರೆಗೆ ಮೈತ್ರಿ ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡುವುದು ಬೇಡ ಎಂದು ನಾನು ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒತ್ತಾಯದ ಮೇರೆ ಮೈತ್ರಿ ಸರ್ಕಾರ ರಚಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಗುಲಾಂ ನಬಿ ಆಜಾದ್ ಅವರನ್ನು ಕಳುಹಿಸಿಕೊಟ್ಟರು, ನಂತರ ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ್, ಕೆ.ಎಚ್.ಮುನಿಯಪ್ಪ ಮೈತ್ರಿ ಸರ್ಕಾರ ಮಾಡೋಣ ಎಂದು ಹೇಳಿದರು.
ಖರ್ಗೆ ಸಿಎಂ ಆಗಲಿ ಎಂದೇ ನಾನು ಹೇಳಿದ್ದೆ, ಆದರೆ ಅವರೇ ಕುಮಾರಸ್ವಾಮಿ ಅವರನ್ನು ಸಿಎಂ ಮಾಡೋಣ ಎಂದಿದ್ದರು ಎಂದು ದೇವೇಗೌಡ ಹೇಳಿದರು. ಮೈತ್ರಿ ಸರ್ಕಾರಕ್ಕೆ ನನ್ನಿಂದ ಯಾವುದೇ ಆತಂಕ ಇಲ್ಲ, ನಾನು ರಾಹುಲ್ ಗಾಂಧಿಗೆ ದೂರು ನೀಡಿದ್ದೇನೆ ಎನ್ನುವುದು ಅಪ್ಪಟ ಸುಳ್ಳು ಎಂದು ದೇವೇಗೌಡ ಅವರು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ಅಂಗೀಕರಿಸಬೇಕೆಂದು ಒತ್ತಡ ಹೇರಿರುವ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಾಳೆ ಪಕ್ಷದ ಸದಸ್ಯರ ಸಭೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷಕ್ಕೆ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ಸಾದ್ಯತೆ ಇದೆ ಎನ್ನಲಾಗಿದೆ.
ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ದೇವೇಗೌಡರು, ಈ ಹಿಂದಿನ ರಾಜಕೀಯ ಬೆಳವಣಿಗೆಗೆ ವಿಶ್ವನಾಥ್,​ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿದ್ದಾರೆ. ಆದರೆ, ವಿಶ್ವನಾಥ್ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ನಮ್ಮ ಪಕ್ಷದಲ್ಲೇ ಇರುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನನ್ನನ್ನು ಒತ್ತಾಯಿಸಬೇಡಿ ಎಂದು ಕೇಳಿಕೊಂಡಿದ್ದಾರೆ. ಅದರಂತೆ ಆಗಲಿ ಎಂದಿರುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com