ಗೌಡರ ಮಧ್ಯಂತರ ಚುನಾವಣೆ ಹೇಳಿಕೆಯಿಂದ ಮೈತ್ರಿ ಪಕ್ಷಗಳಲ್ಲಿ ಆತಂಕ: ಪ್ಯಾಚ್ ಆಪ್ ಗಾಗಿ ಎಚ್ ಡಿಕೆ ಹರಸಾಹಸ

ಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
ಬೆಂಗಳೂರು: ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳಲ್ಲಿ ಆತಂಕ ಮೂಡಿದೆ. ಸಿಎಂ ಕುಮಾರಸ್ವಾಮಿ ಕೂಡ ಎಲ್ಲವೂ ಸರಿಯಾಗಿದೆ ಎಂದು ಬಲವಂತವಾಗಿ ತೋರ್ಪಡಿಸಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಸದ್ಯ ಮಧ್ಯಂತರ ಚುನಾವಣೆ ಬೇಕಿಲ್ಲ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ  ಕರ್ನಾಟಕದಲ್ಲಿ ಎರಡು ಪಕ್ಷಗಳ ಹೀನಾಯ ಸೋಲಿನಿಂದ ಎಚ್ಚೆತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ, ಮತ್ತೊಮ್ಮೆ ಚುನಾವಣೆಗೆ ಹೋದರ ಸೋಲುವ ಆತಂಕ ಎದುರಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರ ಪ್ರಾಬಲ್ಯವಿರುವ ಮೈಸೂರು ಭಾಗದಲ್ಲಿ ಬಿಜೆಪಿ ಜಯಗಳಿಸಿರುವುದು, ಹಾಗೂ ಮೋದಿ ಅಲೆಯ ಕಾರಣದಿಂದ ತಮ್ಮ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದಾರೆ, ಹೀಗಾಗಿ ಚುನಾವಣೆ ಬೇಡ ಎಂದು ಸಂದೇಶ ಕಳುಹಿಸಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಗೂಡಿ ನೈತಿಕ ಆಧಾರದಲ್ಲಿ ಜನರ ಬಳಿ ಮತಯಾಚನೆ ಮಾಡಲು ಸಾಧ್ಯವಿಲ್ಲ, ಕಳೆದ ಒಂದು ವರ್ಷದಲ್ಲಿ ಏನು ಸಾಧನೆ ಮಾಡಿದ್ದೀರಿ ಎಂಬ ಜನ ಪ್ರಶ್ನೆಗೆ ಉತ್ತರಿಸಲು ಸಾಧ್ಯವಿಲ್ಲ, ಆದು ಆಡಳಿತ ವಿರೋಧಿ ಅಲೆ ಸೃಷ್ಠಿಯಲು ಕಾರಣವಾಗುತ್ತದೆ, ಇದು ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧಿ ಫಲಿತಾಂಶಕ್ಕೆ ಕಾರಣವಾಗಬಹುದು ಎಂಬ ಆತಂಕ ಮೂಡಿಸಿದೆ.
ಮತ್ತೊಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ದೇವೇಗೌಡರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ., ದೇವೇಗೌಡರು ಸತ್ಯ ಹೇಳುತ್ತಿದ್ದಾರೆ. ಕಾಂಗ್ರೆಸ್ ನ ಕೆಲ ನಾಯಕರ ವರ್ತನೆಯಿಂದ ಬೇಸತ್ತಿದ್ದಾರೆ, ಬೇರೆ ಯಾವುದೇ ಪಕ್ಷದ ನಾಯಕರ ಹಿಡಿತದಲ್ಲಿರಲು ಜೆಡಿಎಸ್ ಬಯಸುವುದಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.
ದೇವೇಗೌಡರ ಹೇಳಿಕೆಯಲ್ಲಿ ಹೊಸತೇನಿಲ್ಲ, ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಮಾಡುತ್ತಿರುವ ಬ್ಲಾಕ್ ಮೇಲ್ ತಂತ್ರ ಇದಾಗಿದೆ ಎಂದು ಬಿಜೆಪಿ ವಕ್ತಾರ ಜಿ. ಮಧುಸೂದನ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com