ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು,ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದ್ದರು.