ಮಧ್ಯಂತರ ಚುನಾವಣೆಗೆ ತಾಲೀಮು: ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?

ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ...
ಎಚ್.ಕೆ ಕುಮಾರಸ್ವಾಮಿ
ಎಚ್.ಕೆ ಕುಮಾರಸ್ವಾಮಿ
Updated on
ಬೆಂಗಳೂರು: ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ  ನೀಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿವೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ಶಾಸಕ ಹಾಗೂ ದಲಿತ ಮುಖಂಡರಿಗೆ ಮಣೆ ಹಾಕಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸಕಲೇಶಪುರ ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ಆಫರ್ ನೀಡಿದ್ದಾರೆ.
ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಿಂದುಳಿದ ವರ್ಗಗಳ ಮುಖಂಡರ ಸಭೆ ನಡೆಸಿದ್ದಾರೆ ಸಭೆಯಲ್ಲಿ ಈ ಬಗ್ಗೆ ಬಿ.ಬಿ.ನಿಂಗಯ್ಯ, ಬಿಎಂ ಫಾರೂಕ್, ಮಧು ಬಂಗಾರಪ್ಪರ ಚರ್ಚೆ ನಡೆಸಿದ್ದು, ದಲಿತಕೋಟಾದಲ್ಲಿ ಹೆಚ್.ಕೆ.ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ,.
ವಿಶ್ವನಾಥ್ ರಾಜೀನಾಮೆ ಅಂಗೀಕರಿಸದ ಹೆಚ್.ಡಿ.ದೇವೇಗೌಡರು, ಆ ಸ್ಥಾನವನ್ನು ವಿಶ್ವನಾಥ್‌ರಿಂದಲೇ ಬೇರೆಯವರಿಗೆ ವರ್ಗಾಯಿಸುತ್ತೇನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com