ಮುಖ್ಯಮಂತ್ರಿ ಅಮೆರಿಕಾ ಪ್ರವಾಸಕ್ಕೆ ಯಡಿಯೂರಪ್ಪನ ಅನುಮತಿ ಪಡೆಯಬೇಕೆ? : ದೇವೇಗೌಡ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಅನುಮತಿ ಪಡೆದು...
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ
Updated on
ಬೆಂಗಳೂರು:ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಅನುಮತಿ ಪಡೆದು ಅಮೇರಿಕಾ ಪ್ರವಾಸ ಕೈಗೊಳ್ಳಬೇಕೆ? ಕುಮಾರಸ್ವಾಮಿ ಯಾರ ದುಡ್ಡಿನಲ್ಲೂ ಪ್ರವಾಸ ಕೈಗೊಂಡಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಿಡಿ ಕಾರಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಬೆಂಗಳೂರು ಘಟಕದ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜದ ಆದಿಚುಂಚನಗಿರಿ ಮಠದ ದೇವಾಲಯ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೋಗಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪನ ಅನುಮತಿ ಪಡೆಯಬೇಕೆ?. ಕುಮಾರಸ್ವಾಮಿ ಯಾರ ದುಡ್ಡಿನಲ್ಲೂ ಪ್ರವಾಸ ಕೈಗೊಂಡಿಲ್ಲ. ಬೆಳಗ್ಗೆಯಿಂದ ಸಂಜೆಯವರೆಗೂ ಹೀಗೆ ಒಂದಲ್ಲಾ ಒಂದು ವಿಷಯದಲ್ಲಿ ಮಾತಾಡುವುದು ತಮಾಷೆಯಂತೆ ಕಾಣುತ್ತಿದೆ ಎಂದರು.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಪಾದಯಾತ್ರೆ ಕೈಗೊಂಡಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿ ನಾಯಕರು ಏನು ಬೇಕಾದರೂ ತಿಳಿದುಕೊಳ್ಳಲಿ. ನಾವು ಪಕ್ಷ‌ ಸಂಘಟನೆಗಾಗಿ ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಪಾದಯಾತ್ರೆಯಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗದಂತೆ, ಕಿಂಚಿತ್ತೂ ತೊಂದರೆ ಆಗದಂತೆ‌ ಪಾದಯಾತ್ರೆಯನ್ನು ಸ್ವತಃ ತಾವೇ ಸಂಘಟನೆ ಮಾಡುವುದಾಗಿ ದೇವೇಗೌಡ ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com