ಈ ಹಿಂದೆ ನಡೆದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಉಮೇಶ್ ಜಾಧವ್ ಸರ್ಕಾರ ಮತ್ತು ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು. ಇದನ್ನೇ ಅಸ್ತ್ರವಾಗಿಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಖರ್ಗೆ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿಸುವ ಪ್ಲ್ಯಾನ್ ಮಾಡಿದ್ದು ಸ್ಥಳೀಯ ಮಟ್ಟದಲ್ಲಿ ಮಾತುಕತೆಯಾಗಿದೆ ಎನ್ನಲಾಗುತ್ತಿದೆ. ಹೈಕಮಾಂಡ್ ನಲ್ಲೂ ಚರ್ಚೆಯಾಗಿದೆ ಎನ್ನಲಾಗುತ್ತೀದೆ. ಇದೇ ಕಾರಣಕ್ಕೆ ಇಂದು ಉಮೇಶ್ ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.