ವೀರಶೈವ-ಲಿಂಗಾಯತ ಸಮುದಾಯದ ಸರ್ಕಾರಿ ನೌಕರರನ್ನು ಸರ್ಕಾರ ಕಡೆಗಣಿಸುತ್ತಿದೆ: ಬಿ.ಎಸ್. ಯಡಿಯೂರಪ್ಪ

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರರನ್ನು ಕಳೆದ 5 ವರ್ಷಗಳಿಂದ...
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on
ಮೈಸೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರರನ್ನು ಕಳೆದ 5 ವರ್ಷಗಳಿಂದ ಕಡೆಗಣಿಸಲಾಗುತ್ತಿದ್ದು ಇಂದಿನ ಮೈತ್ರಿ ಸರ್ಕಾರ ಈ ಬಗ್ಗೆ ಕಿವುಡನಂತೆ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅವರು ನಿನ್ನೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ವೀರಶೈವ-ಲಿಂಗಾಯತ ನೌಕರರ ಅಭಿವೃದ್ಧಿ ಸಂಸ್ಥೆಯ 10ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಅದು ನೇಮಕಾತಿ ಅಥವಾ ವರ್ಗಾವಣೆಯಾಗಿರಲಿ, ಸರ್ಕಾರಿ ಉದ್ಯೋಗದಲ್ಲಿರುವ ಲಿಂಗಾಯತ ಮತ್ತು ವೀರಶೈವ ಸಮುದಾಯದವರನ್ನು ಅವರಿಗೆ ಸಾಮರ್ಥ್ಯವಿದ್ದರೂ ಕೂಡ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಈ ವಿಷಯವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com