ಕಾಂಗ್ರೆಸ್ ಸಂಸದರಿರುವ 4 ಕ್ಷೇತ್ರಗಳಿಗೆ ಜೆಡಿಎಸ್ ಪಟ್ಟು ಹಿಡಿದಿರುವುದು ಕಾಂಗ್ರೆಸ್ ಗೆ ಆ ಸ್ಥಾನಗಳನ್ನು ಬಿಟ್ಟುಕೊಡುವುದು ಕಷ್ಟವಾಗಬಹುದು. ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳು ಮಾತ್ರವಲ್ಲದೆ, ಜೆಡಿಎಸ್ ಬೆಂಗಳೂರು ಉತ್ತರ, ಶಿವಮೊಗ್ಗ, ಮೈಸೂರು, ವಿಜಯಪುರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ, ರಾಯಚೂರು ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕೂಡ ಜೆಡಿಎಸ್ ಗೆ ಟಿಕೆಟ್ ಬೇಕು ಎಂದು ದೇವೇಗೌಡರು ಪಟ್ಟು ಹಿಡಿಯುವ ಸಾಧ್ಯತೆಯಿದೆ.