ಕ್ಷಮೆ ಕೇಳೋಕೆ ಹುಚ್ಚು ಹಿಡಿದಿದೆಯೇ: ಸುಮಲತಾ ವಿರುದ್ಧದ ಹೇಳಿಕೆಗೆ ರೇವಣ್ಣ ಸಮರ್ಥನೆ

ಗಂಡ ಸತ್ತು ಒಂದೆರೆಡು ತಿಂಗಳಾಗಿಲ್ಲ,ಸುಮಲತಾ ಅವರಿಗೆ ರಾಜಕೀಯ ಬೇಕಿತ್ತಾ ಎಂಬ ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ರೇವಣ್ಣ ಮಾತ್ರ ಸಮರ್ಥಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಗಂಡ ಸತ್ತು ಒಂದೆರೆಡು ತಿಂಗಳಾಗಿಲ್ಲ,ಸುಮಲತಾ ಅವರಿಗೆ ರಾಜಕೀಯ ಬೇಕಿತ್ತಾ ಎಂಬ ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ  ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ರೇವಣ್ಣ ಮಾತ್ರ ಸಮರ್ಥಿಸಿಕೊಂಡಿದ್ದಾರೆ.

ಹಿಂದೂ ಸಂಸ್ಕೃತಿಯ ಪ್ರಕಾರ ಗಂಡ ಸತ್ತವರು ಕೆಲವು ದಿನ ಮನೆಯಿಂದ ಹೊರಬಾರದು ಎಂಬ ನಿಯಮ ಇದೆ. ಅದಕ್ಕೆ ಈ ಮಾತು ಹೇಳಿದೆ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಅಲ್ಲದೇ, ಆ ಹೇಳಿಕೆ ನೀಡಿದ್ದಕ್ಕೆ ನಾನು ಕ್ಷಮೆ ಕೇಳಲ್ಲ. ಕ್ಷಮೆ ಕೇಳೋಕೆ ಹುಚ್ಚು ಹಿಡಿದಿದೆಯೇ ಎಂದು ಪ್ರಶ್ನಿಸಿದ್ದಾರೆ.

ನಿಖಿಲ್ ಸ್ಪರ್ಧಿಸಬೇಕು ಎಂಬುದು ಮಂಡ್ಯ ಜನರ ಹಾಗೂ ಕಾರ್ಯಕರ್ತರ ಅಭಿಪ್ರಾಯ. ಮಂಡ್ಯಕ್ಕೆ ನಿಖಿಲ್ ಕೊಡುಗೆ ಏನು ಎಂಬ ಪ್ರಶ್ನೆ ಕೇಳೋದಾದರೆ, ಸುಮಲತಾ ಅವರು ಮಂಡ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ರೇವಣ್ಣ ಕೇಳಿದ್ದಾರೆ.

ಸಮಯ ಬಂದಾಗ ಸುಮಲತಾ ಹಿಂದೆ ಯಾರಿದ್ದಾರೆ ಎಂಬುದನ್ನು ಹೇಳುತ್ತೇನೆ ಎಂದ ರೇವಣ್ಣ, ಸುಮಲತಾ ಅವರು ಇದುವರೆಗೂ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.ಈ ರಾಜಕೀಯದಲ್ಲಿ ಡ್ರಾಮ ಬಂದಲು ಬಂದಿದ್ದಾರೆ.ಅವರು ಚುನಾವಣೆಯಲ್ಲಿ ಸ್ಪರ್ಧಿಸೋದು ಬೇಡ ಅಂತಾ ನಾನು ಹೇಳಿಲ್ಲ. ಅವರು ಇನ್ನೂ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಲಿ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com