ಕಲಬುರಗಿ: ದೇಶದ ಸೈನಿಕರ ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ದೇಶದ ವಿಚಾರ ಬಂದಾಗ ಒಗ್ಗಟ್ಟಾಗಿ ಎದುರಿಸಲು ಸಿದ್ದ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ನಾವು ಕೂಡ ವಾಯು ಸೇನೆ ದಾಳಿಯನ್ನು ಸಮರ್ಥನೆ ಮಾಡಿಕೊಂಡಿದ್ದೇವೆ, ರಾಹುಲ್ ಗಾಂಧಿ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದರು.
ವ್ಯಕ್ತಿಗತವಾಗಿ ನನ್ನ ಮೇಲೆ ಪ್ರೀತಿ ಇರುವ ಕಾರಣ ಮೋದಿ ಕಲಬುರಗಿಗೆ ಬಂದು ಪ್ರಚಾರ ಮಾಡಿದ್ದಾರೆ. ಇನ್ನಷ್ಟು ಕೇಂದ್ರದ ನಾಯಕರು ನನ್ನ ಕ್ಷೇತ್ರಕ್ಕೆ ಬರುವವರಿದ್ದಾರೆ. ಯಾರೇ ಬಂದರೂ, ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ನನ್ನನ್ನು ಏನೂ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೊಳ್ಳುವಂಥ ಸಾಧನೆಯನ್ನೇನೂ ಮಾಡಿಲ್ಲ. ಹೀಗಾಗಿ, ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿರುತ್ತಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕಿಡಿಕಾರಿದ್ದಾರೆ.