ನಟಿ ಸುಮಲತಾ ಅಂಬರೀಶ್ ವಿರುದ್ಧ ಸಚಿವ ಎಚ್.ಡಿ.ರೇವಣ್ಣ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದು, ಯಾರೇ ಆಗಲಿ ಇನ್ನೊಬ್ಬರ ವಿರುದ್ಧ ಸಣ್ಣತನದ ಮಾತನಾಡುವುದು ಸರಿಯಲ್ಲ. ಮಂಡ್ಯದ ವಿಚಾರವನ್ನು ನನಗೆ ಬಿಟ್ಟುಬಿಡಿ. ರೇವಣ್ಣ ಹೇಳಿಕೆ ಬಗ್ಗೆ ಹೆಚ್ಚಿನ ಚರ್ಚೆ ಮಾಡುವ ಅಗತ್ಯವಿಲ್ಲ, ನಮ್ಮ ನಾಯಕರುಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.