ಇಂದು ಜೆಪಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಂಡ್ಯ ಜಿಲ್ಲೆಯ ಜನರ ಪ್ರೀತಿ, ಅಭಿಮಾನವನ್ನು ದುರುಪಯೋಗಪಡಿಸಿಕೊಳ್ಳುವ ಕುಟುಂಬ ತಮ್ಮದಲ್ಲ. ಮಂಡ್ಯ ಜಿಲ್ಲೆಗೂ ತಮ್ಮ ಕುಟುಂಬಕ್ಕೂ ಹಲವಾರು ವರ್ಷಗಳ ಸಂಬಂಧ ಇದೆ. ನಿಖಿಲ್ ಸೋಲು ಗೆಲವಿನ ಬಗ್ಗೆ ಜಿಲ್ಲೆಯ ಜನರು ತೀರ್ಮಾನ ಮಾಡುತ್ತಾರೆ. ಇದನ್ನು ಯಾರೋ ಪಕ್ಷದ ಮುಖಂಡರು ತೀರ್ಮಾನ ಮಾಡುವುದಲ್ಲ ಎಂದು ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.