ಜೆಡಿಎಸ್ ಗೆ ಮೈಸೂರು ಬಿಟ್ಟುಕೊಡಲು ಸಿದ್ದು ನಕಾರ: ಕಗ್ಗಂಟಾಗಿಯೇ ಉಳಿದ ಮೂರು ಕ್ಷೇತ್ರಗಳ ಸೀಟು ಹಂಚಿಕೆ

ಮಂಡ್ಯ, ಹಾಸನ ಸೇರಿ ಜೆಡಿಎಸ್‌ಗೆ 6 ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್‌ ಮುಕ್ತ ಮನಸ್ಸು ಹೊಂದಿದೆ. ಆದರೆ ಕಾಂಗ್ರೆಸ್‌ ಸಂಸದರಿರುವ ತುಮಕೂರು, ರಾಯಚೂರು ಮತ್ತು ಮೈಸೂರುಗಳನ್ನು...
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
Updated on: 
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದ ಸ್ಕ್ರೀನಿಂಗ್‌ ಕಮಿಟಿ ಸಭೆ ದೆಹಲಿಯಲ್ಲಿ ಸೋಮವಾರ ನಡೆಯಿತು. 
ಮೂರು ಗಂಟೆಗೂ ಹೆಚ್ಚು ಹೊತ್ತು ನಡೆದ ಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ನ ಹಾಲಿ ಸಂಸದರಿರುವ ಕ್ಷೇತ್ರ ಹೊರತುಪಡಿಸಿ ಇತರ ಕ್ಷೇತ್ರಗಳ ಸಂಭಾವ್ಯರ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಜಾತಿ, ಪ್ರಾದೇಶಿಕತೆ, ಟಿಕೆಟ್‌ ಆಕಾಂಕ್ಷಿಗಳ ಗೆಲುವಿನ ಸಾಮರ್ಥ್ಯ ಆಧರಿಸಿ ಸಾಧಕ ಬಾಧಕಗಳ ಅವಲೋಕನ ಮಾಡಲಾಯಿತು. 
ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವರಾದ ಎಂ.ಬಿ.ಪಾಟೀಲ್‌, ಡಿ.ಕೆ.ಶಿವಕುಮಾರ್‌, ಸಂಸದರಾದ ಎಂ.ವೀರಪ್ಪ ಮೊಯ್ಲಿ, ಕೆ.ಎಚ್‌.ಮುನಿಯಪ್ಪ ಭಾಗಿಯಾಗಿದ್ದರು. 
ನಂತರ ಮಾರ್ಚ್‌ 16ರಂದು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ನಿಲುವಿಗೆ ಬರಲಾಯಿತು. ಮಾರ್ಚ್‌ 17ರಂದು ಮೊದಲ ಹಂತದ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿದೆ. 
ಮಂಡ್ಯ, ಹಾಸನ ಸೇರಿ ಜೆಡಿಎಸ್‌ಗೆ 6 ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್‌ ಮುಕ್ತ ಮನಸ್ಸು ಹೊಂದಿದೆ. ಆದರೆ ಕಾಂಗ್ರೆಸ್‌ ಸಂಸದರಿರುವ ತುಮಕೂರು, ರಾಯಚೂರು ಮತ್ತು ಮೈಸೂರುಗಳನ್ನು  ಕೊಡುವಂತೆ ಜೆಡಿಎಸ್‌ ಕೇಳಿದ್ದು, ಈ ಪ್ರಸ್ತಾವವನ್ನು ಸಿದ್ದರಾಮಯ್ಯ ಬಲವಾಗಿ ವಿರೋಧಿಸಿದ್ದಾರೆ. ಇದರಿಂದಾಗಿ ಸೀಟು ಹೊಂದಾಣಿಕೆಯಲ್ಲಿ ಹಗ್ಗಜಗ್ಗಾಟ ಶುರುವಾಗಿದೆ.
 ಈ ಬಿಕ್ಕಟ್ಟನ್ನು ರಾಹುಲ್‌ ಗಾಂಧಿ ಅವರೇ ಇತ್ಯರ್ಥಪಡಿಸಬೇಕಾಗಿ ಬಂದಿದೆ. ಈ ಸಂಬಂಧ ಅವರು ಜೆಡಿಎಸ್‌ ವರಿಷ್ಠರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com