ಸುಮಲತಾ ಎಂಟ್ರಿಯಿಂದ ರಂಗೇರಿದ ಮಂಡ್ಯ ಕಣ: ಭಾರೀ ಕುತೂಹಲ ಕೆರಳಿಸಿದೆ ಸೋಮವಾರದ ಬೆಳವಣಿಗೆಗಳು!

ಸೋಮವಾರ ಮಂಡ್ಯ ಜೆಡಿಎಸ್ ಸಂಸದ ಎಲ್ ಆರ್ ಶಿವರಾಮೇಗೌಡ, ಕಾಂಗ್ರೆಸ್ ನಾಯಕರುಗಳಾದ ಚಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಬಿಜೆಪಿ ಮುಖಂಡರುಗಳಾದ ...
ಸುಮಲತಾ ಎಂಟ್ರಿಯಿಂದ ರಂಗೇರಿದ ಮಂಡ್ಯ  ಕಣ
ಸುಮಲತಾ ಎಂಟ್ರಿಯಿಂದ ರಂಗೇರಿದ ಮಂಡ್ಯ ಕಣ
ಬೆಂಗಳೂರು:  ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ ಲೋಕಸಭೆ ಚುನಾವಣೆ ಕಣಕ್ಕೆ ನಟಿ ಸುಮಲತಾ ಅಂಬರೀಷ್ ಎಂಟ್ರಿಯಿಂದ ಮತ್ತಷ್ಟು ರಂಗು ಬಂದಿದೆ,  ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಾಯಕರುಗಳು ಮಂಡ್ಯಕ್ಕಾಗಿ ಹಲವು ರಣ ತಂತ್ರಗಳನ್ನು ರೂಪಿಸುತ್ತಿದ್ದಾರೆ.
ಸೋಮವಾರ ಮಂಡ್ಯ ಜೆಡಿಎಸ್ ಸಂಸದ ಎಲ್ ಆರ್ ಶಿವರಾಮೇಗೌಡ, ಕಾಂಗ್ರೆಸ್ ನಾಯಕರುಗಳಾದ ಚಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಬಿಜೆಪಿ ಮುಖಂಡರುಗಳಾದ ಡಾ. ಅಶ್ವತ್ಥ ನಾರಾಯಣ ಹಾಗೂ ಸಿ,ಪಿ ಯೋಗೇಶ್ವರ್ ನಗರದ ಹೋಟೆಲ್ ವೊಂದರಲ್ಲಿ ಸಭೆ ನಡೆಸಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಕಣಕ್ಕಿಳಿಯುವುದು ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳಿಗೆ ಅಸಮಾಧಾನ ತಂದಿದೆ, ಹೀಗಾಗಿ ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತಿರುವ ಬಿಜೆಪಿ ಸುಮಲತಾ ಗೆ ಬೆಂಬಲ ನೀಡಲು ನಿರ್ಧರಿಸಿದೆ.
ಕಳೆದ ಕೆಲವು ದಿನಗಳಿಂದ ಸುಮಲತಾ ಮಂಡ್ಯದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಆಧರೆ ತಮ್ಮ ಯೋಜನೆಗಳ ಬಗ್ಗೆ ಬಹಿರಂಗವಾಗಿ ಎಲ್ಲೂ ಪ್ರಕಟಿಸಿಲ್ಲ, ಕಾಂಗ್ರೆಸ್ ಅಧಿಕೃತವಾಗಿ ಪಟ್ಟಿ ಪ್ರಕಟಿಸಲಿ ಎಂದು ಕಾಯುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ,
ಆದರೆ ಸ್ಥಳೀಯ ಕೈ ಮುಖಂಡರು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಲು ವಿರೋಧ ವ್ಯಕ್ತ ಪಡಿಸಿದ್ದಾರೆ. 2018 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಂಡ್ಯದ ಎಲ್ಲಾ ಕ್ಷೇತ್ರಗಳನ್ನು ಕಳೆದು ಕೊಂಡಿತ್ತು,  ಮಂಡ್ಯ ಸೀಟು ಹಂಚಿಕೆ ವಿಚಾರವಾಗಿ ಸಮಸ್ಯೆ ಉಂಟಾಗಿತ್ತು, ಹಾಗಾಗಿ ಸ್ಥಳೀಯ ನಾಯಕರು ಜೆಡಿಎಸ್ ಅಭ್ಯರ್ಥಿಗೆ ಬದಲು ಪಕ್ಷೇತರ ಅಭ್ಯರ್ಥಿಗೆ ತಮ್ಮ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಿಲ್ಲ ಮದ್ಯಾಹ್ನದ ಭೋಜನಕ್ಕಾಗಿ ಸೇರಿದ್ದೆವು ಎಂದು ಜೆಡಿಎಸ್ ಸಂಸದ ಎಲ್,ಶಿವರಾಮೇಗೌಡ ಹೇಳಿದ್ದಾರೆ, ನಾನು ದೇವೇಗೌಡರ ಕುಟುಂಬದ ಸದಸ್ಯ,  ನಾನು ಈಗಾಗಲೇ ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ, ಮಂಡ್ಯದಿಂದ್ ನಿಖಿಲ್ ಕುಮಾರ ಸ್ವಾಮೀ ಸ್ಪರ್ಧಿಸುವುದರಲ್ಲಿ ಯಾವುದೇ ಬದಲಾವಣೆಯಿಲ್ಲ, ನಿಖಿಲ್ ಗೆದ್ದೆ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರ ಸ್ಪರ್ಧೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಭಾನುವಾರ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಮನೆಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದರು., ಆದರೆ ಆ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಲಿಲ್ಲ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com