ಯಡಿಯೂರಪ್ಪ
ರಾಜಕೀಯ
ಶೋಭಾ ಕರಂದ್ಲಾಜೆ ಸೇರಿ ಎಲ್ಲಾ ಹಾಲಿ ಸಂಸದರಿಗೂ ಟಿಕೆಟ್: ಯಡಿಯೂರಪ್ಪ
ಶೋಭಾ ಕರಂದ್ಲಾಜೆ ಸೇರಿ ಬಿಜೆಪಿಯ ಎಲ್ಲಾ ಹಾಲಿ 16 ಸಂಸದರಿಗೆ ಟಿಕೆಟ್ ಸಿಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಹೇಳಿದ್ದಾರೆ...
ಬೆಂಗಳೂರು: ಶೋಭಾ ಕರಂದ್ಲಾಜೆ ಸೇರಿ ಬಿಜೆಪಿಯ ಎಲ್ಲಾ ಹಾಲಿ 16 ಸಂಸದರಿಗೆ ಟಿಕೆಟ್ ಸಿಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಲಿ ಸಂಸದರಿಗೆಲ್ಲಾ ಟಿಕೆಟ್ ಸಿಗಲಿದೆ, ಉಳಿದ ಕಡೆಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸುತ್ತಿರುವುದಾಗಿ ಹೇಳಿದ್ದಾರೆ,
ಮಾರ್ಚ್ 15ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಸೇರಲಿದ್ದು, ಅಂದೇ ಮೊದಲ ಪಟ್ಟಿ ಬಿಡುಗಡೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ,ಇನ್ನೂ ಮಂಡ್ಯ ಲೋಕಸಭೆ ಚುನಾವಣೆಹೆ ಸಂಬಂಧಿಸಿದಂತೆ ಸುಮಲತಾ ಅಂಬರೀಷ್ ಅವರ ನಡೆಯನ್ನು ನಾವು ಎದುರು ನೋಡುತ್ತಿದ್ದೇವೆ, ಅವರ ನಿಲುವಿನ ಮೇಲೆ ನಾವು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ,
ಇನ್ನೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ಯಡಿಯೂರಪ್ಪ, ಅಧಿಕಾರಕ್ಕೆ ಬಂದ 23 ಗಂಟೆಗಳಲ್ಲಿ ರೈತರ ಲಾಮನ್ನಾ ಮಾಡುವುದಾಗಿ ಹೇಳಿದ್ದರು, ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಯಾಗಿಲ್ಲ ಎಂದು ಆರೋಪಿಸಿದ್ದಾರೆ,
ಮೋದಿ ಸಾಧನೆಯೇ ಬಿಜೆಪಿಗೆ ರಕ್ಷಾ ಕವಚವಾಗಿದೆ,60 ವರ್ಷ ಕಾಂಗ್ರೆಸ್ ಮಾಡದ ಸಾಧನೆಯನ್ನು ಮೋದಿ ಸರ್ಕಾರ ಮಾಡಿದೆ, ಮೋದಿ ನಾಯಕತ್ವ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ