ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ದೂರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟಿನ ಮೂಲವನ್ನು ಪ್ರಶ್ನಿಸಿದ ಆರೋಪದ ಮೇರೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟಿನ ಮೂಲವನ್ನು ಪ್ರಶ್ನಿಸಿದ ಆರೋಪದ ಮೇರೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.

ಮೇಲ್ಮನೆ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ದೂರು ದಾಖಲಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟಿನ ಮೂಲವನ್ನು ಪ್ರಶ್ನಿಸುವ ಮೂಲಕ ಅನಂತ್ ಕುಮಾರ್ ಹೆಗ್ಡೆ, ರಾಹುಲ್ ಅವರನ್ನು ತೇಜೋವಧೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಕೆಲ ದಿನಗಳ‌ ಹಿಂದೆ ಹೆಗ್ಡೆ, ರಾಹುಲ್ ಗಾಂಧಿ ಅವರ ತಂದೆ ಮುಸಲ್ಮಾನರು, ತಾಯಿ ಕ್ರೈಸ್ತರು. ಅವರ ಡಿಎನ್ಏ ಪರೀಕ್ಷಿಸಿ ಎನ್ನುವ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com