ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಈಗಾಗಲೇ ಜಿಲ್ಲಾದ್ಯಂತ ಕಾಂಗ್ರೆಸ್ ನಾಯಕರು ಹಾಗೂ ಕಾರ‍್ಯಕರ್ತರು, ಅಂಬಿ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಇನ್ನೂ ಕೆಲವು ದಿನ ಕಾಂಗ್ರೆಸ್ ನಿರ್ಧಾರಕ್ಕಾಗಿ ಕಾಯುತ್ತೇನೆ. ಆದರೆ, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ಪರ್ಧೆ ಖಚಿತ'' ಎಂದು ಪುನರುಚ್ಚರಿಸಿದರು.