ಕಳೆದ ಸಲಕ್ಕಿಂತ ಈ ಬಾರಿ ಮೋದಿಗೆ ಹೆಚ್ಚು ಮತ: ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಯಡಿಯೂರಪ್ಪ

ದೇಶದಲ್ಲಿ ಮೋದಿ ಪರವಾದ ಅಲೆ ಈಗಲೂ ಪ್ರಭಾವಶಾಲಿಯಾಗಿದೆ, ಕಳೆದ ಸಲಕ್ಕಿಂತ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೆಚ್ಚು ಮತ ಲಭಿಸಲಿದೆ ಎಂದು....
ಶೃಂಗೇರಿಯಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ
ಶೃಂಗೇರಿಯಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ
Updated on
ಶೃಂಗೇರಿ: ದೇಶದಲ್ಲಿ ಮೋದಿ ಪರವಾದ ಅಲೆ ಈಗಲೂ ಪ್ರಭಾವಶಾಲಿಯಾಗಿದೆ, ಕಳೆದ ಸಲಕ್ಕಿಂತ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೆಚ್ಚು ಮತ ಲಭಿಸಲಿದೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿದ್ದ ಯಡಿಯೂಪಪ್ಪ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ದೇವಿ ಶಾರದೆ ಹಾಗೂ ಜಗದ್ಗುರುಗಳ ಆಶೀರ್ವಾದ ಪಡೆದಿದ್ದಾರೆ.
"ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹಾಲಿಒ ಸಂಸದರಾದ ಶೋಭಾ ಕರಂದ್ಲಾಜೆಯವರೇ ಸ್ಪರ್ಧಿಸಲಿದ್ದಾರೆ. ಕ್ಷೇತ್ರದಲ್ಲಿ ಅಭ್ಯರ್ಥಿಗಳ ಬದಲಾವಣೆ ಇಲ್ಲ. ಶೋಭಾ ಅವರು ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸವೂ ನನಗಿದೆ." ಯಡಿಯೂರಪ್ಪ ಹೇಳಿದ್ದಾರೆ.
ಮಾರ್ಚ್ 17ರಂದು ಕೋರ್ ಕಮಿಟಿ ಸಭೆ ಕರೆದಿದ್ದು 18ರಂದು ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಅವರು ಪ್ರಕಟಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಹ ಯಡಿಯೂರಪ್ಪ ಹೇಳಿದ್ದಾರೆ.
ಶೃಂಗೇರಿಯ ಮಾಜಿ ಶಾಸಕ ಡಿ.ಎನ್. ಜೀವರಾಜ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಡಿಯೂರಪ್ಪ ಜತೆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com