ಇಂದು ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಅಂದು ರಕ್ಷಣಾ ಸಚಿವರಿಗೆ ಮನವಿ ಮಾಡಿ ಮಂಡ್ಯಕ್ಕೆ ಪಾರ್ಥಿವ ಶರೀರ ತರಲು ಪ್ರಯತ್ನಿಸಿದ್ದೆ. ಈಗ ಅಂಬರೀಷ್ ಅವರ ಆತ್ಮ ಏನು ಹೇಳುತ್ತದೆ ಯೋಚಿಸಿ? ಆದರೆ ಅಂಬಿ ಅಭಿಮಾನಿಗಳು ನಮ್ಮ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ನನಗೆ ನಿಖಿಲ್ ಬೇರೆಯಲ್ಲ, ಅಂಬರೀಷ್ ಮಗ ಬೇರೆಯಲ್ಲ. ಅಂಬರೀಷ್ ನಿಧನದ ಸುದ್ದಿ ನನಗೆ ಮೊದಲು ನೀಡಿದ್ದೇ ನಿಖಿಲ್ ಎಂದು ಹೇಳಿದ್ದರು.