ಕಿರುಹೊತ್ತಿಗೆ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜಕೀಯ
ಬಿಜೆಪಿಯದ್ದು ಸುಳ್ಳು ಪೊಳ್ಳು ಜೊಳ್ಳು ಭರವಸೆ: ಕಾಂಗ್ರೆಸ್ ನಿಂದ ಕಿರುಹೊತ್ತಿಗೆ ಬಿಡುಗಡೆ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಮಾಡಿರುವ ಸಾಧನೆಗಳು ಏನೂ....
ಬೆಂಗಳೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಮಾಡಿರುವ ಸಾಧನೆಗಳು ಏನೂ ಇಲ್ಲದಿರುವಾಗ ಬಿಜೆಪಿ ಭಾವನಾತ್ಮಕ ಹೇಳಿಕೆಗಳ ಮೂಲಕ ಮತ ಯಾಚಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ `ಸುಳ್ಳು, ಪೊಳ್ಳು, ಜೊಳ್ಳು’ ಎಂಬ ಘೋಷಣೆಯಡಿಯಲ್ಲಿ ಕಾಂಗ್ರೆಸ್ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಯೋಜನೆ ದುರ್ಬಳಕೆ ಮಾಡುವ ಪ್ರಯತ್ನ ಮಾಡಿತ್ತು. ಭೂ ಸ್ವಾಧೀನ ಕಾಯ್ದೆ ಸಡಿಲ ಮಾಡುವ ಪ್ರಯತ್ನ ಮಾಡಿದರು. ಸಾಮಾನ್ಯ ಜನರ ಬಗ್ಗೆ ಬಿಜೆಪಿಯವರಿಗೆ ಕನಿಕರವಿಲ್ಲ. ಈ ಹಿಂದೆ ಮಂದಿರ ನಿರ್ಮಾಣದ ವಿಚಾರದಲ್ಲಿ ರಾಜಕಾರಣ ಮಾಡಿದರು. ಈಗ ರಾಷ್ಟ್ರೀಯತೆ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬೆಳಗಾವಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಅದನ್ನ ಬಹಿರಂಗಪಡಿಸಲು ಈಗ ಆಗುವುದಿಲ್ಲ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು ಎಂಬ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಹೀಗಾಗಿ ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ