ಬೆಂ. ಉತ್ತರ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಗೆ ಭಾರೀ ಹೊಡೆತ- ಎಸ್‍.ಟಿ.ಸೋಮಶೇಖರ್

ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಆದರೂ ಹೈಕಮಾಂಡ್ ಹೇಳಿರುವುದಾಗಿ ಶಾಸಕ ...
ಎಸ್‍.ಟಿ.ಸೋಮಶೇಖರ್
ಎಸ್‍.ಟಿ.ಸೋಮಶೇಖರ್
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಆದರೂ ಹೈಕಮಾಂಡ್ ಹೇಳಿರುವುದಾಗಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‍ ಹೈಕಮಾಂಡ್, ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಆದ್ದ ಅದನ್ನು ಪಾಲಿಸುತ್ತೇವೆ ಎಂದು ಬಿಡಿಎ ಅಧ್ಯಕ್ಷ ಹಾರಿಂದ ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್‍ನಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. 

ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇವೆ ಎಂದು ಹೇಳುತ್ತಾರೆ, ಆದರೆ ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು  ಹೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಸೋಮಶೇಖರ್ ಪರೋಕ್ಷವಾಗಿ ಮುಖ್ಯಮಂತ್ರಿಗೆ ಟಾಂಗ್ ನೀಡಿದರು.

ಕ್ಷೇತ್ರದಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದರೂ ಜೆಡಿಎಸ್‍ಗಾಗಿ ಕೆಲಸ ಮಾಡುತ್ತೇವೆ. ಇಂದು ಸಂಜೆ ಸಚಿವ ಕೃಷ್ಣ ಬೈರೇಗೌಡ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.

ಪಾಲಿಸುತ್ತೇವೆ ಎಂದು ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‍ ಹೈಕಮಾಂಡ್, ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಆದ್ದರಿಂದ ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್‍ನಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. 
ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇವೆ ಎಂದು ಹೇಳುತ್ತಾರೆ, ಆದರೆ ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು  ಹೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಸೋಮಶೇಖರ್ ಪರೋಕ್ಷವಾಗಿ ಮುಖ್ಯಮಂತ್ರಿಗೆ ಟಾಂಗ್ ನೀಡಿದರು.
ಕ್ಷೇತ್ರದಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದರೂ ಜೆಡಿಎಸ್‍ಗಾಗಿ ಕೆಲಸ ಮಾಡುತ್ತೇವೆ. ಇಂದು ಸಂಜೆ ಸಚಿವ ಕೃಷ್ಣ ಬೈರೇಗೌಡ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com