ರಾಜಕೀಯ

ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಆಹ್ವಾನ

ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಆಹ್ವಾನ
ಸಿದ್ದರಾಮಯ್ಯ, ರಾಹುಲ್ ಗಾಂಧಿ
Published On :
ಬೆಂಗಳೂರು: ಈ ಬಾರಿ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ.
ಕರ್ನಾಟಕ ಯಾವಾಗಲೂ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿದೆ. ಇದು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಸಹ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ, ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪರವಾಗಿ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುವ ರಾಹುಲ್ ಗಾಂಧಿಗೆ ಈ ಬಾರಿ ಕರ್ನಾಟಕದಿಂದಲೂ ಸ್ಪರ್ಧಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಸಂಬಂಧ ರಾಜ್ಯ ಕಾಂಗ್ರೆಸ್ ನಾಯಕರು #RaGaFromKarnataka ಎಂಬ ಹ್ಯಾಷ್‌ ಟ್ಯಾಗ್ ಬಳಸಿ ಟ್ವಿಟ್ಟರ್ ಅಭಿಯಾನ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.