ಬೆಂಗಳೂರಿನ ಹೊಟೇಲ್ ರೂಂನಲ್ಲಿ ಕೋಟಿ ನಗದು ಪತ್ತೆ: ಸಚಿವ ಕೃಷ್ಣ ಭೈರೇಗೌಡ ರಾಜೀನಾಮೆಗೆ ಬಿಜೆಪಿ ಪಟ್ಟು

ಗಾಂಧಿನಗರದ ಹೊಟೇಲ್ ರೂಂನಿಂದ ವಶಪಡಿಸಿಕೊಳ್ಳಲಾದ ಭಾರೀ ಮೊತ್ತ ರಾಜ್ಯ ರಾಜಕೀಯದಲ್ಲಿ ...
ಸಚಿವ ಕೃಷ್ಣ ಭೈರೇಗೌಡ
ಸಚಿವ ಕೃಷ್ಣ ಭೈರೇಗೌಡ
Updated on
ಬೆಂಗಳೂರು: ಗಾಂಧಿನಗರದ ಹೊಟೇಲ್ ರೂಂನಿಂದ ವಶಪಡಿಸಿಕೊಳ್ಳಲಾದ ಭಾರೀ ಮೊತ್ತ ರಾಜ್ಯ ರಾಜಕೀಯದಲ್ಲಿ ತೀವ್ರ ಅಲ್ಲೋಲ-ಕಲ್ಲೋಲ ಮೂಡಿಸಿದೆ. ಈ ನಗದು ಹಣದ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ಪಾತ್ರವಿದ್ದು ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಿಖರ ಮಾಹಿತಿ ಪಡೆದು ನಿನ್ನೆ ಹಠಾತ್ ಆಗಿ ಹೊಟೇಲ್ ಮೇಲೆ ದಾಳಿ ನಡೆಸಿ ಒಂದೂವರೆ ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಱೆ ಯ ಕಾರ್ಯಕಾರಿ ಎಂಜಿನಿಯರ್ ನಾರಾಯಣ ಗೌಡ ಪಾಟೀಲ್ ಅವರಿಗೆ ಸೇರಿದ ಹಣ ಇದು ಎನ್ನಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಇದನ್ನು ಸರ್ಕಾರದ ವಿರುದ್ಧ ಆರೋಪಕ್ಕೆ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com