ರಾಜ್ಯ ನಾಯಕರು ದೆಹಲಿಯತ್ತ ದೌಡು: ನಾಳೆ ಬಿಜೆಪಿ, ಮಂಗಳವಾರ ಕೈ ಅಭ್ಯರ್ಥಿಗಳ ಆಯ್ಕೆ

ರಾಜ್ಯದಲ್ಲಿ ಮಾರ್ಚ್ 19ರಂದು ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದ್ದು, ಆ ವೇಳೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಮೂರು ಪಕ್ಷಗಳಲ್ಲಿ ಚಟವಟಿಕೆಗಳು ಬಿರುಸುಗೊಂಡಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 19ರಂದು ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದ್ದು, ಆ ವೇಳೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಮೂರು ಪಕ್ಷಗಳಲ್ಲಿ ಚಟವಟಿಕೆಗಳು ಬಿರುಸುಗೊಂಡಿವೆ.
ಬಿಜೆಪಿ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಿ ಅಂತಿಮ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಸೋಮವಾರ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಲ್ಲಿ ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ.
ತುಮಕೂರು ಕ್ಷೇತ್ರವನ್ನು ಮತ್ತೆ ಪಡೆಯಲು ಹಾಲಿ ಸಂಸದ ಮುದ್ಧ ಹನುಮೇಗೌಡ ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ತುಮಕೂರನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕೆ.ಎನ್ ರಾಜಣ್ಣ ಹಠ ಹಿಡಿದು ಕುಳಿತಿದ್ದಾರೆ.
ಕೋಲಾರ ಸಂಸದ ಕೆ.ಎಚ್. ಮುನಿಯಪ್ಪ ವಿರುದ್ಧ ವಿರೋಧಿ ಅಲೆ ಇದ್ದು ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಶಾಸಕರು ದಿಲ್ಲಿಯಲ್ಲಿಯೇ ಮೊಕ್ಕಾಂ ಹೂಡಿದ್ದು, ಎಐಸಿಸಿ ನಾಯಕರ ಭೇಟಿಯಲ್ಲಿ ನಿರತರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com