ನಾಳೆ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಸುಮಲತಾ ಅಂಬರೀಶ್, ತಮ್ಮ ಸ್ಪರ್ಧೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಯಾವಾಗ ನಾಮಪತ್ರ ಸಲ್ಲಿಸುತ್ತಾರೆ ಎಂಬ ಬಗ್ಗೆ ತಿಳಿಸುವುದಾಗಿ ಹೇಳಿದ್ದಾರೆ. ಆದರೆ, ಸುದ್ದಿಗೋಷ್ಠಿಯಲ್ಲಿ ಯಾರು ಇರುತ್ತಾರೆ ಮತ್ತು ಏನು ವಿಚಾರ ಎಂಬುದರ ಬಗ್ಗೆ ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.