ಬೆಂಗಳೂರು: ಕೆಲ ತಿಂಗಳುಗಳಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಗಳನ್ನು ಮಾಡುವ ಮೂಲಕ ಕೇವಲ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಇದೀಗ ಬೆಂಗಳೂರಿನಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನವೋದ್ಯಮಿಗಳ ಜತೆ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ರಮ್ಯಾ ದಿಢೀರ್ ಅಂತಾ ಪ್ರತ್ಯಕ್ಷರಾಗಿದ್ದಾರೆ.
ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿರುವ ರಮ್ಯಾ ಕಾರ್ಯಾಕ್ರಮದ ಉಸ್ತುವಾರಿಯನ್ನು ನೋಡಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಮೃತಪಟ್ಟ ಸಮಯದಲ್ಲೂ ರಾಜ್ಯಕ್ಕೆ ರಮ್ಯಾ ಬಂದಿರಲಿಲ್ಲ. ಇದೀಗ ರಾಹುಲ್ ಗಾಂಧಿ ಕಾರ್ಯಕ್ರಮಕ್ಕಾಗಿ ರಾಜ್ಯಕ್ಕೆ ಬಂದಿರುವುದಕ್ಕೆ ಕಾಂಗ್ರೆಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.