ಮೈತ್ರಿ ಅಭ್ಯರ್ಥಿಗೆ ಮೈಸೂರಿನಲ್ಲಿ ಅಪಸ್ವರ: ಸಾಂಪ್ರದಾಯಿಕ ವಿರೋಧಿ ಕಾಂಗ್ರೆಸ್ ಗೆ ಕೈಕೊಟ್ಟು ಬಿ ಜೆಪಿಗೆ ಬೆಂಬಲ?

Published On :
ಮೈಸೂರು: ಲೋಕಸಭೆ ಚುನಾವಣೆಗಾಗಿ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅಳೆದು ತೂಗುತ್ತಿದ್ದಾರೆ.
ಆದರೆ ಈ ಭಾಗದ ಜನತೆ ಇನ್ನೂ ಗೊಂದಲದಲ್ಲಿ ಮುಳುಗಿದ್ದಾರೆ. ದಶಕಗಳಿಂದ ಇಲ್ಲಿನ ಜೆಡಿಎಸ್ ಪರವಾಗಿ ಮತ ಚಲಾಯಿಸುತ್ತಿದ್ದಾರೆ, ಇಲ್ಲಿನ ಒಕ್ಕಲಿಗರೆಲ್ಲೆ ಜೆಡಿಎಸ್ ಬೆಂಬಲಿಸುತ್ತಿದ್ದಾರೆ, ಒಕ್ಕಲಿಗರ ಪ್ರಾತಿನಿದ್ಯವಿರುವ ಈ ಭಾಗದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಸಾಂಪ್ರದಾಯಿಕ ವಿರೋಧಿಯಾಗಿದೆ.
ಕಳೆದ ಚುನಾವಣೆಯಲ್ಲಿ ಹಲವು ಮಂದಿ ಬಿಜೆಪಿ ಪರವಾಗಿ ಮತಚಲಾಯಿಸಿದ್ದರಿಂದ ಬಿಜೆಪಿ ಗೆಲುವು ಸಾಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಇನ್ನೂ ಅಭ್ಯರ್ಥಿ ಯಾರು ಎಂದು ನಿರ್ಧರಿಸದಿರುವುದು ಇಲ್ಲಿನ ಜನತೆಗೆ ಗೊಂದಲ ಉಂಟು ಮಾಡಿದೆ. ತಾವು ಯಾರನ್ನೂ ಬೆಂಬಲಿಸಬೇಕು ಎಂಬ ಬಗ್ಗೆ ತಿಳಿಯುತ್ತಿಲ್ಲ,
ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿರುವುದಕ್ಕೆ ಇಲ್ಲಿನ ಜನ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ವಿಜಯ್ ಶಂಕರ್ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ, ಆದರೆ ಒಕ್ಕಲಿಗರ ಪ್ರಾಬಲ್ಯವಿರುವ ಈ ಭಾಗದಲ್ಲಿ ಕುರುಬರಾಗಿರುವ ವಿಜಯ್ ಶಂಕರ್ ಅವರನ್ನು ಕಣಕ್ಕಿಳಿಸುತ್ತಿದ್ದಾರೆ, ಆದರೆ ಇದು ಕಾಂಗ್ರೆಸ್ ಗೆ ಬ್ಯಾಕ್ ಫೈರ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


