ಎಚ್‍ಡಿಕೆ ನಡವಳಿಕೆ ಮೇಲೆ ಸರ್ಕಾರದ ಭವಿಷ್ಯ ನಿಂತಿದೆ: ಚೆಲುವರಾಯಸ್ವಾಮಿ

ಮುಖ್ಯಮಂತ್ರಿ ಎಚ್‍ ಡಿ ಕುಮಾರಸ್ವಾಮಿ ಅವರ ನಡವಳಿಕೆಯ ಮೇಲೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮಂಡ್ಯ: ಮುಖ್ಯಮಂತ್ರಿ ಎಚ್‍ ಡಿ ಕುಮಾರಸ್ವಾಮಿ ಅವರ ನಡವಳಿಕೆಯ ಮೇಲೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಅಭದ್ರಗೊಳಿಸಲು ಕಾಂಗ್ರೆಸ್ ಶಾಸಕರು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಮೇಲಿನ ಪ್ರೀತಿಯಿಂದಾಗಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಹೈಕಮಾಂಡ್ ತನ್ನದೇ ಆದ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಶಿಸ್ತು ಕ್ರಮದ ಬಗ್ಗೆ ಮಾತನಾಡಿದ ಚೆಲುವರಾಯಸ್ವಾಮಿ, “ನಾನು ಮಂಡ್ಯ ಲೋಕಸಭಾ ಚುನಾವಣೆ ಸಮಯದಲ್ಲಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧವಾಗಿ ಪ್ರಚಾರ ಮಾಡಿಲ್ಲ. ಎರಡೂ ಕಡೆಯಿಂದಲೂ ಸಮಾನ ಅಂತರ ಕಾಯ್ದುಕೊಂಡಿದ್ದೇನೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಪ್ರಶ್ನೆ ಇಲ್ಲಿ ಬರುವುದೇ ಇಲ್ಲ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com