ಕಾಂಗ್ರೆಸ್ 40ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆದ್ದರೆ ವಿಜಯ್ ಚೌಕದಲ್ಲಿ ಮೋದಿ ನೇಣು ಹಾಕಿಕೊಳ್ಳುತ್ತಾರಾ: ಖರ್ಗೆ ಪ್ರಶ್ನೆ

17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 40ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ವಿಜಯ್ ಚೌಕದಲ್ಲಿ ನೇಣು ಹಾಕಿಕೊಳ್ಳುತ್ತಾರಾ ? ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ಕಲಬುರಗಿ: 17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 40ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ವಿಜಯ್ ಚೌಕದಲ್ಲಿ ನೇಣು ಹಾಕಿಕೊಳ್ಳುತ್ತಾರಾ ? ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

 ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,  ಮೋದಿ ಎಲ್ಲಿಗೆ ಹೋದರು ಕಾಂಗ್ರೆಸ್ 40ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.ಇದನ್ನು ನೀವು ನಂಬುತ್ತೀರಾ? ಒಂದು ವೇಳೆ ಕಾಂಗ್ರೆಸ್ ಪಕ್ಷ 40 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಪಡೆದರೆ ಮೋದಿ ದೆಹಲಿಯ ವಿಜಯ್ ಚೌಕದಲ್ಲಿ ನೇಣು ಹಾಕಿಕೊಳ್ಳುತ್ತಾರಾ ಎಂದರು.

ಮೋದಿ ಕುರಿತ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಅವರ ಕ್ಷಮೆಯಾಚಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ  ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com