ಬಿಎಸ್ ವೈ ಗೆ ಸಿಎಂ ಹುದ್ದೆ ಮೇಲೆ ಕಣ್ಣು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಒಕ್ಕಲಿಗರು- ಲಿಂಗಾಯತರ ನಡುವೆ ಫೈಟ್!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಕಾಣುತ್ತಿದ್ದಾರೆ, ಇನ್ನೊಂದೆಡೆ ತೆರವಾದ ...
ಯಡಿಯೂರಪ್ಪ
ಯಡಿಯೂರಪ್ಪ
Updated on
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಕಾಣುತ್ತಿದ್ದಾರೆ, ಇನ್ನೊಂದೆಡೆ ತೆರವಾದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದಾರೆ. ಹಲವು ನಾಯಕರು ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ, ಯಡಿಯೂರಪ್ಪ ಅವರ ಸ್ಥಾನಕ್ಕೆ ಯಾರೂ ಸೂಕ್ತ ಎಂಬ ಬಗ್ಗೆ  ಬಿಜೆಪಿ ಪ್ರಮುಖ ನಾಯಕರು  ಚಿಂತಿಸುತ್ತಿದ್ದಾರೆ. ಲೋಕಸಭೆ ಫಲಿತಾಂಶ ಹಾಗೂ ಸಮ್ಮಿಶ್ರ ಸರ್ಕಾರದ ಸ್ಥಿರತೆ ಯಡಿಯೂರಪ್ಪ ಅವರ ವಯಕ್ತಿಕ ಅದೃಷ್ಟ ಮುಂದಿನ ತೀರ್ಮಾನವಾಗಲಿದೆ.
ಮೇ 23ರ ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ,ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಒಕ್ಕಲಿಗರು ಮತ್ತು ಲಿಂಗಾಯತ ಮುಖಂಡರು ಲಾಬಿ ನಡೆಸುತ್ತಿದ್ದಾರೆ.  ಒಕ್ಕಲಿಗ ನಾಯಕರಾದ ಆರ್, ಅಶೋಕ ಮತ್ತು ಸಿ,ಟಿ ರವಿ ಹಾಗೂ ಲಿಂಗಾಯತ ಮುಖಂಡರಾದ ಉಮೇಶ್ ಕತ್ತಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದಾರೆ.
ಆರ್ ಎಸ್ ಎಸ್ ಮತ್ತು ಬಿಜೆಪಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿರುವ ನಾಯಕರು ಅಧ್ಯಕ್ಷ ಹುದ್ದೆಗಾಗಿ ತಮ್ಮ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಜೆಡಿಎಸ್ ಗೆ ಟಕ್ಕರ್ ನೀಡಲು ಒಕ್ಕಲಿಗ ಮುಖಂಡರಾದ ಅಶೋಕ ಅಥವಾ ರವಿಗೆ ನೀಡಬಹುದಾಗಿದೆ. ಈ ಇಬ್ಬರು ನಾಯಕರು  ಆರ್ ಎಸ್ ಎಸ್ ಜೊತೆ ಉತ್ತಮ ಸಂಬಂಧ ಹೊಂದಿದೆ.
ಆದರೆ ಎರಡು ಸಮುದಾಯದವರು ತಾವು ಲಾಬಿ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ, ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಂಡ ನಂತರ ಅದಕ್ಕೆ ಸೂಕ್ತ ಅಭ್ಯರ್ಥಿ ನಾನೇ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇನ್ನೂ ಪರಿಶಿಷ್ಟ ಜಾತಿ ಮತಗಳನ್ನು ಸೆಳೆಯಲು  ಗೋವಿಂದ್ ಖಾರಜೋಳ್ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲು ಚಿಂತಿಸುತ್ತಿದೆ. ಕಾರಜೋಳ್ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧರಾಗಿದ್ದಾರೆ, ಕಾರಜೋಳ್ ಉತ್ತಮ ವ್ಯಕ್ತಿಯಾಗಿದ್ದಾರೆ, ಆದರೆ ತಾವು ಈ ಹುದ್ದೆ ಆಕಾಂಕ್ಷಿಯಲ್ಲ ಎಂದು ಕಾರಜೋಳ್ ತಿಳಿಸಿದ್ದಾರೆ.
ಒಂದು ವೇಳೆ ತಮಗೆ ಅವಕಾಶ ಸಿಕ್ಕರೇ ತಾವು ಉತ್ತಮವಾಗಿ ಕಾರ್ಯ ನಿರ್ವಹಿಸುವುದಾಗಿ ಬಸನಗೌಡ ಪಾಟೀಲ್ ಯತ್ನಾಳ್ ರಾಜಕೀಯ ವಿರೋಧಿ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ನನಗೆ ಅವಕಾಶ ಸಿಕ್ಕರೇ ಇತಿಹಾಸ ಸೃಷ್ಟಿಸುತ್ತೇನೆ ಎಂದು ಹೇಳಿದ್ದಾರೆ.
ಆದರೆ ಇನ್ನೂ ಕೂಡ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರ ಹುದ್ದೆ ಬದಲಾವಣೆಗಾಗಿ ಆಯ್ರೆ ಪ್ರಕ್ರಿಯೆ ಆರಂಭಿಸಿಲ್ಲ, ಸಾಮಾಜಿಕ ನ್ಯಾಯದ ಅನುಸಾರವಾಗಿ ರಾಜ್ಯಾಧ್ಯಕ್ಷರ ಹುದ್ದೆ ನೀಡಲಾಗುತ್ತದೆ, ಹೀಗಾಗಿ ಕಮಗೆ ಹುದ್ದೆ ಸಿಗಲಿದೆ ಎಂದು ಕೆಲ ನಾಯಕರು ವಿಶ್ವಾಸದಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com