ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಹಿನ್ನೆಲೆ: ಮೇ 29ಕ್ಕೆ ಸಿಎಲ್ ಪಿ ಸಭೆ ಕರೆದ ಕಾಂಗ್ರೆಸ್

ರಾಜ್ಯ ರಾಜಕೀಯದಲ್ಲಾದ ಕ್ಷಿಪ್ರ ಬೆಳವಣಿಗೆಗಳ ನಂತರ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕ ಮೇ 29 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ನಡೆಸಲು ತೀರ್ಮಾನಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಾದ ಕ್ಷಿಪ್ರ ಬೆಳವಣಿಗೆಗಳ ನಂತರ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕ ಮೇ 29 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ನಡೆಸಲು ತೀರ್ಮಾನಿಸಿದೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನ 79 ಶಾಸಕರು ಹಾಗೂ ಜಾತ್ಯಾತೀತ ಜನತಾದಳದ 37 ಶಾಸಕರು ಕೂಡಿ ಸಮ್ಮಿಶ್ರ ಸರ್ಕಾರ ನಡೆಸ್ದುತ್ತಿದ್ದಾರೆ. ಆದರೆ ಇತ್ತೀಚ್ವಿನ ಲೋಕಸಭೆ ಚುನಾವಣೆ ನಂತರ ಮೈತ್ರಿ ನಾಯಕರ ವಿರುದ್ಧ ಅವರದೇ ಪಕ್ಷಗಳಲ್ಲಿ ಭಿನ್ನಾಭಿಪ್ರಾಯದ ಮಾತುಗಳು ಕೇಳಿಬಂದಿದ್ದವು.
ಎರಡೂ ಪಕ್ಷಗಳಲ್ಲಿ ಈ ಭಿನ್ನಾಭಿಪ್ರಾಯ, ಪರಸ್ಪರ ತಿಕ್ಕಾಟಗಳು ರಾಜ್ಯದಲ್ಲಿನ ಬಿಜೆಪಿಗೆ ಚುನಾವಣೆಯಲ್ಲಿ ಹೆಚ್ಚು ಸೀಟುಗಳು ಗೆಲ್ಲಲು ಸಹಾಯ ಂಆಡಿದೆ.ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25  ಸೀಟು ಗಳಿಸಿದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದೊಂದು ಸ್ಥಾನ, ಪಕ್ಷೇತ್ರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಜಯ ಸಾಧಿಸಿದ್ದಾರೆ.
ಸಿಎಲ್ಪಿ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿನ ಒಡಕನ್ನು ಕಡಿಮೆಗೊಳಿಸುವುದಕ್ಕೆ ಹಾಗೂ ಪಕ್ಷದಲ್ಲಿನ ಆಂತರಿಕ ತಿಕ್ಕಾಟವನ್ನು ಉಪಶಮನ ಮಾಡಲು ಮಹತ್ವದ ತೀರ್ಮಾನಕ್ಕೆ ಬರುವ ಸಾಧ್ಯತೆಗಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com