ನಾವು 105 ಮಂದಿ ಹುಲಿಗಳಿದ್ದಂತೆ, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ

ನಾವು 105 ಹುಲಿಗಳಿದ್ದಂತೆ, ನಮ್ಮ ಯಾವ ಶಾಸಕರನ್ನೂ ಮುಟ್ಟುವ ಶಕ್ತಿ ಯಾರಿಗೂ ಇಲ್ಲ. ನಾವು ಆಪರೇಷನ್ ಕಮಲ ಮಾಡಲ್ಲ. ನಾವು ವಿರೋಧ ಪಕ್ಷವಾಗಿ ಕೆಲಸ ...
ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ
Updated on: 
ಶಿವಮೊಗ್ಗ: ನಾವು 105 ಹುಲಿಗಳಿದ್ದಂತೆ,  ನಮ್ಮ ಯಾವ ಶಾಸಕರನ್ನೂ ಮುಟ್ಟುವ ಶಕ್ತಿ ಯಾರಿಗೂ ಇಲ್ಲ. ನಾವು ಆಪರೇಷನ್ ಕಮಲ ಮಾಡಲ್ಲ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ, ಸರ್ಕಾರ ಬೀಳಿಸುವ ಪ್ರಯತ್ನ ನಾವು ಮಾಡಲ್ಲ.ಎಂಬುದಾಗಿ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮೈತ್ರಿ ಬೇಡ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಹೇಳೋರು, ಕೇಳೋರು ಯಾರು ಇಲ್ಲ. ಚುನಾವಣೆಗೆ ಹೋಗುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.
ನದಿ, ನೀರು, ಹೆಣ್ಣು ಮಕ್ಕಳ ಬಗ್ಗೆ ಗಮನ ಕೊಡುತ್ತಿಲ್ಲ. ಜಿಂದಾಲ್ ನವರು ಸಾವಿರಾರು ಕೋಟಿ ಬಾಕಿ ಕೊಡಬೇಕಿದೆ. ಆದರೂ 3,666 ಎಕರೆ 30 ಕೋಟಿಗೆ ಮಾರಾಟ ಮಾಡಲು ಹೊರಟಿದ್ದಾರೆ.ಎಷ್ಟು ಆಗುತ್ತೋ, ಅಷ್ಟನ್ನು ದೋಚಿಕೊಂಡು ಹೋಗಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com