ಪಕ್ಷ ವಿರೋಧಿ ಚಟುವಟಿಕೆ ಆರೋಪ: ಜೆಡಿಎಸ್ ಎಂಎಲ್‌ಸಿ ಪುಟ್ಟಣ್ಣ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪುಟ್ಟಣ್ಣ
ಪುಟ್ಟಣ್ಣ
Updated on

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಪುಟ್ಟಣ್ಣ ಅವರನ್ನು  ಪಕ್ಷದಿಂದ ಉಚ್ಛಾಟಿಸಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್‍ನಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಪಕ್ಷ್ದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರಲಿಲ್ಲ ಎನ್ನಲಾಗಿದೆ. ಅಲ್ಲದೆ ಕೆಲ ದಿನಗಳ ಹಿಂದೆ ರಾಮನಗರದಲ್ಲಿ ಮಾತನಾಡಿದ್ದ ಪುಟ್ಟಣ್ಣ "ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ." ಎಂದೂ ಮುಂದಿನ ನಡೆ ಬಗೆಗೆ ಇನ್ನೂ ಯೋಚಿಸಿಲ್ಲ ಎಂದೂ ಹೆಳಿಕೊಂಡಿದ್ದರು.

ಪುಟ್ಟಣ್ಣ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com