ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಜೆಡಿಎಸ್ ಗಮನಹರಿಸಬೇಕು: ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್

ಉಪಚುನಾವಣೆ ವೇಳೆ ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಜೆಡಿಎಸ್ ಗಮನಹರಿಸಬೇಕೆಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ ಹೇಳಿದ್ದಾರೆ. 
ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್
ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್

ಕಲಬುರಗಿ: ಉಪಚುನಾವಣೆ ವೇಳೆ ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಜೆಡಿಎಸ್ ಗಮನಹರಿಸಬೇಕೆಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉಪಚುನಾವಣೆಗೆ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ನಿಲ್ಲಿಸುವತ್ತ ಗಮನಹರಿಸುವ ಬದಲು, ಗೆಲ್ಲುವ ಕ್ಷೇತ್ರಗಳತ್ತ ಮಾತ್ರವೇ ಪಕ್ಷ ಗಮನಹರಿಸಬೇಕು ಎಂದು ಹೇಳಿದ್ದಾರೆ. 

15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈ 15 ಕ್ಷೇತ್ರಗಳಲ್ಲಿ 3 ಕ್ಷೇತ್ರಗಳಲ್ಲಿ 2018ರ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಮತ್ತು ಯಶವಂತಪುರ ಸೇರಿ 2-3 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ. 

ಉಪಚುನಾವಣೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಶನಿವಾರ ಸಭೆಯನ್ನು ಆಯೋಜಿಸಲಾಗಿದ್ದು, ಸಭೆ ವೇಳೆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ. ಬಿಜೆಪಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳನ್ನು ಮಾಡುತ್ತಿಲ್ಲ. ಮಧ್ಯಂತರ ಚುನಾವಣೆ ಪರ ನಾನಿಲ್ಲ. ಮತ್ತೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದಲೇ ಸಿದ್ದರಾಮಯ್ಯ ಅವರು ಸರ್ಕಾರ ಉರುಳಿಸಲು ಯತ್ನಿಸುತ್ತಿದ್ದಾರೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ತಿಳಿಸಿದ್ದಾರೆ. 

ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಉರುಳಿಸಲು ಯತ್ನಿಸಿದರೆ, ಜೆಡಿಎಸ್ ರಾಜ್ಯ ಸರ್ಕಾರವನ್ನು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಬೇಗ ಈ ಕುರಿತು ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com