ಟಿಪ್ಪು ಪಠ್ಯ, ಬಿಜೆಪಿಯಿಂದ ಇತಿಹಾಸ ತಿರುಚುವ ಕೆಲಸ- ಈಶ್ವರ್ ಖಂಡ್ರೆ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ಶಾಲಾಮಕ್ಕಳ ಪಠ್ಯಪುಸ್ತಕದಿಂದ ಕೈಬಿಡುವ ಮೂಲಕ ಬಿಜೆಪಿ ಇತಿಹಾಸವನ್ನು ತಿರುಚುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Updated on: 

ಬೆಂಗಳೂರು: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ಶಾಲಾಮಕ್ಕಳ ಪಠ್ಯಪುಸ್ತಕದಿಂದ ಕೈಬಿಡುವ ಮೂಲಕ ಬಿಜೆಪಿ ಇತಿಹಾಸವನ್ನು ತಿರುಚುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಬಿಜೆಪಿಯವರು ಇತಿಹಾಸ ತಿರುಚುವ‌ ಮೂಲಕ ಜನರ ಭಾವನೆ ಕೆರಳಿಸಿ, ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಹೊರಟಿದ್ದಾರೆ. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಟಿಪ್ಪು  ಬ್ರಿಟಿಷ್ ರ ವಿರುದ್ದ ಹೋರಾಟ ಮಾಡಿದ್ದು, ಅತನನ್ನು ಪಠ್ಯದಿಂದ ತೆಗೆಯುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಟೀಕಿಸಿದರು.

ಈ ಸಂಬಂಧ ಉಚ್ಚ ನ್ಯಾಯಾಲಯ ಸಹ ಬುಧವಾರ ಸರ್ಕಾರಕ್ಕೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಂತೆ  ಸೂಚನೆ ನೀಡಿದೆ.  ಹೀಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಜಾಗೃತವಾಗಿ, ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com