'ಸವಕಲು ನಾಣ್ಯವಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಹಿಟ್ ಅಂಡ್ ರನ್​ ಹೇಳಿಕೆ' 

ಮಾಜಿ ಸಿಎಂ ಸಿದ್ದರಾಮಯ್ಯ ಈಗ ಸವಕಲು ನಾಣ್ಯ ಆಗಿದ್ದಾರೆ. ಹೀಗಾಗಿ ಏನೋ ಒಂದು ಹೇಳುತ್ತಾರೆ. ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು  ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಈಗ ಸವಕಲು ನಾಣ್ಯ ಆಗಿದ್ದಾರೆ. ಹೀಗಾಗಿ ಏನೋ ಒಂದು ಹೇಳುತ್ತಾರೆ. ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು  ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಬಿಜೆಪಿ ಜೊತೆ ಜೆಡಿಎಸ್​ ಒಳ ಒಪ್ಪಂದವಾಗಿರಬೇಕು. ಇದೇ ಉದ್ದೇಶದಿಂದ ಉಪಚುನಾವಣೆ ಬಳಿಕವೂ ಬಿಜೆಪಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ ಎಂದು ಟೀಕಿಸಿರುವ ಸಿದ್ದರಾಮಯ್ಯ ಹೇಳಿಕೆ ಹಾಸ್ಯಸ್ಪದ. ಇತ್ತೀಚೆಗೆ ಸಿದ್ದರಾಮಯ್ಯ ಅವರು ಹಿಟ್​ ಅಂಡ್​ ರನ್​ ನಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಶ್ವನಾಥ್ ಲೇವಡಿ ಮಾಡಿದ್ದಾರೆ.

ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಎಸ್. ಆರ್.ವಿಶ್ವನಾಥ್ ನಾಳೆ ಕೋರ್ಟ್ ತೀರ್ಮಾನದ ನಂತರ ಅಭ್ಯರ್ಥಿಗಳು ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಸವಕಲು ನಾಣ್ಯವಾಗಿದ್ದಾರೆ. ಇದೇ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆ ಜೆಡಿಎಸ್​ ಜೊತೆಯೇ ಸರ್ಕಾರ ರಚಿಸಿ ಈಗ ಅವರ ವಿರುದ್ಧ ಈ ರೀತಿ ಹೇಳಿಕೆ ನೀಡುತ್ತಿರುವುದು ಹಾಸ್ಯಸ್ಪದವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com