ಆದಾಯ ತೆರಿಗೆ,ಇಡಿಯಿಂದ ಬಚಾವಾಗಲು ಎಂಟಿಬಿ ನಾಗರಾಜ್ ಬಿಜೆಪಿ ಸೇರ್ಪಡೆ- ಶರತ್ ಬಚ್ಚೇಗೌಡ

ಎಂಟಿಬಿ ನಾಗರಾಜ್​ ಅವರಿಗೆ ಕಾಂಗ್ರೆಸ್ ಪಕ್ಷ​ ಎಲ್ಲವನ್ನೂ ಕೊಟ್ಟಿದೆ. ಆದರೀಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ಬಚಾವಾಗಲು ಬಿಜೆಪಿ ಪಕ್ಷ ಸೇರಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹೇಳಿದ್ದಾರೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು​: ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಅವರ ಕ್ಷೇತ್ರದಲ್ಲಿನ ಉಪ ಚುನಾವಣಾ ಕಣ ರಂಗು ಪಡೆದುಕೊಂಡಿದೆ. ಪಕ್ಷೇತರ ಅಭ್ಯರ್ಥಿ ಶರತ್  ಬಚ್ಚೇಗೌಡ ಅವರ ಸ್ಪರ್ಧೆಯಿಂದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. 

ಬೆಂಗಳೂರು ಗ್ರಾಮಾಂತರದ ಆನೇಕಲ್​ ನಲ್ಲಿ ಮಾತನಾಡಿದ ಶರತ್ ಬಚ್ಚೇಗೌಡ,  ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಅವರಿಗೆ ಕಾಂಗ್ರೆಸ್ ಪಕ್ಷ​ ಎಲ್ಲವನ್ನೂ ಕೊಟ್ಟಿದೆ. ಆದರೀಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ಬಚಾವಾಗಲು ಬಿಜೆಪಿ ಪಕ್ಷ ಸೇರಿದ್ದಾರೆ ಎಂದರು. 

ಅನರ್ಹ ಶಾಸಕ ಎಂಟಿಬಿ ನಾಗ ರಾಜ್​ ಒಬ್ಬ ಮೋಸ ಗಾರ,ಮನೆ ಮುರುಕ ಎಂದು ಜನ ಹೇಳುತ್ತಿದ್ದರು.ಅದಕ್ಕೆ ತಾಜಾ ಉದಾಹರಣೆ ನನ್ನ ಕುಟುಂಬ.ತಮ್ಮ ಕುತಂತ್ರದಿಂದ ಅಪ್ಪ-ಮಗನನ್ನೇ ದೂರ ಮಾಡಿಬಿಟ್ಟರು ಎಂದು ಆರೋಪಿಸಿ ದರು.

ಎಂಟಿಬಿ ನಾಗರಾಜ್ ಸ್ವಾರ್ಥಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಸ್ವಾರ್ಥವನ್ನು ತಿರಸ್ಕರಿಸಿ , ಸ್ವಾಭಿಮಾನಕ್ಕೆ ಮತ ನೀಡಬೇಕೆಂದು ಮತದಾರರಲ್ಲಿ ಅವರು ಮನವಿ ಮಾಡಿಕೊಂಡರು. 

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಹೊಸಕೋಟೆ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದರೆ, ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಜೆಡಿಎಸ್ ಬೆಂಬಲ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com