ಉಪಚುನಾವಣೆ ಸಮರ: 7 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ 

ಉಪಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡು ದಿನಗಳಷ್ಟೇ ಬಾಕಿಯಿದ್ದು, ಈ ನಡುವಲ್ಲೇ 15 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಶನಿವಾರ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉಪಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡು ದಿನಗಳಷ್ಟೇ ಬಾಕಿಯಿದ್ದು, ಈ ನಡುವಲ್ಲೇ 15 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಶನಿವಾರ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಜಧಾನಿ ದೆಹಲಿಗೆ ತೆರಳಿದ್ದು, ಈ ವೇಳೆ ಪಕ್ಷದ ಅಭ್ಯರ್ಥಿಗಳ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದರಂತೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಶಿವಾಜಿನಗರ ಕ್ಷೇತ್ರದ ಕುರಿತು ಕಾಂಗ್ರೆಸ್ ಇನ್ನೂ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ. ಈ ನಡುವೆ ಎಂಎಲ್'ಸಿ ರಿಜ್ವಾನ್ ಅರ್ಷದ್'ಗೆ ಟಿಕೆಟ್ ನೀಡುವಂತೆ ದಿನೇಶ್ ಗುಂಡೂರಾವ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಇದರಂತೆ ಮತ್ತಷ್ಟು ಶಾಸಕರು ಶಿವಾಜಿನಗರ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಇನ್ನು ಅನರ್ಹ ಶಾಸಕ ರೋಷನ್ ಬೇಗ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com