ಸವದಿ ಬೇಕು, ಕುಮಟಳ್ಳಿ ಬೇಡವೇ ಬೇಡ: ಅಥಣಿ ಬಿಜೆಪಿ ಕಾರ್ಯಕರ್ತರು

ಡಿಸೆಂಬರ್ 5 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ  ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ ಕಣಕ್ಕಿಳಿದಿದ್ದಾರೆ, ಆದರೆ ಇಲ್ಲಿನ ಸ್ಥಳೀಯ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಮಹೇಶ್ ಕುಮಟಳ್ಳಿ ವಿರುದ್ಧ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದೆ.
ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ
ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ

ಬೆಳಗಾವಿ: ಡಿಸೆಂಬರ್ 5 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ  ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ ಕಣಕ್ಕಿಳಿದಿದ್ದಾರೆ, ಆದರೆ ಇಲ್ಲಿನ ಸ್ಥಳೀಯ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಮಹೇಶ್ ಕುಮಟಳ್ಳಿ ವಿರುದ್ಧ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದೆ.

ಮಹೇಶ್ ಕುಮಟಳ್ಳಿ ಅವರನ್ನು ನಮ್ಮ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಮಹೇಶ್ ಕುಮಟಳ್ಳಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಇನ್ನು ಒಂದು ದಿನ ಸಮಯವಿದೆ, ಒಂದು ವೇಳೆ  ಲಕ್ಷ್ಮಣ ಸವದಿ ಅವರಿಗೆ ನೀಡಬೇಕು, ಇಲ್ಲದಿದ್ದರಾ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಮಹೇಶ್ ಕುಮಠಳ್ಳಿ ಅವರಿಗೆ ಮತ ಚಲಾಯಿಸುವುದಿಲ್ಲ  ಎಂದು ಜಗದೀಶ್ ಶೆಟ್ಟರ್ ಅವರಿಗೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com