ಸಿದ್ದರಾಮಯ್ಯ
ರಾಜಕೀಯ
ಅನರ್ಹ ಶಾಸಕರನ್ನು ಸೋಲಿಸುವುದೇ ಕಾಂಗ್ರೆಸ್ ಮುಖ್ಯ ಗುರಿ: ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಕಾರಣವಾದ ಅನರ್ಹ ಶಾಸಕರನ್ನು ಸೋಲಿಸುವುದೇ ಪಕ್ಷದ ಮುಖ್ಯ ಉದ್ದೇಶ, ಗುರಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಮೈಸೂರು: ರಾಜ್ಯದಲ್ಲಿ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಕಾರಣವಾದ ಅನರ್ಹ ಶಾಸಕರನ್ನು ಸೋಲಿಸುವುದೇ ಪಕ್ಷದ ಮುಖ್ಯ ಉದ್ದೇಶ, ಗುರಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ತಮ್ಮ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದು ಅದು ಸತ್ಯಕ್ಕೆ ದೂರವಾಗಿದೆ ಅವರ ಬಹಿರಂಗ ಆರೋಪಗಳ ಬಗ್ಗೆ ಆತಂಕವಿಲ್ಲ,ಏಕೆಂದರೆ ಅವುಗಳಿಗೆ ಯಾವುದೇ ಮೌಲ್ಯ , ಕಿಮ್ಮತ್ತು ಇಲ್ಲ ಎಂದು ಚಾಟಿ ಬೀಸಿದರು.
ಅವರಿಗೆ ಪಾಠ ಕಲಿಸಲು ಪಕ್ಷಕ್ಕೆ ರಾಜೀನಾಮೆ ನೀಡಿದವರ ವಿರುದ್ಧ ಪಕ್ಷ ದೂರು ನೀಡಿದ್ದು ಸಭಾಧ್ಯಕ್ಷರು ಸರಿಯಾದ ಪಾಠ ಕಲಿಸಿದ್ದಾರೆ, ಕೋರ್ಟ್ ಸಹ ಇದನ್ನು ಎತ್ತಿ ಹಿಡಿದಿದೆ ಇನ್ನು ಜನರು ಪಾಠ ಕಲಿಸುವುದು ಮಾತ್ರ ಬಾಕಿಯಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ