ರಂಗೇರಿದ ಗೋಕಾಕ್ ಉಪ ಸಮರ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಗೋಕಾಕ್ ಉಪ ಚುನಾವಣೆ ಕಣ ಮತ್ತಷ್ಟು ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ, ಇದರ ಬೆನ್ನಲ್ಲೇ ಮಾಜಿ ಶಾಸಕ ಸತೀಶ್ ಜಾರಕಿಹೊಳಿ ಕೂಡ ಪ್ರತ್ಯೇಕವಾಗಿ ನಾಮ ಪತ್ರ ಸಲ್ಲಿಸಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on: 

ಬೆಳಗಾವಿ: ಗೋಕಾಕ್ ಉಪ ಚುನಾವಣೆ ಕಣ ಮತ್ತಷ್ಟು ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ, ಇದರ ಬೆನ್ನಲ್ಲೇ ಮಾಜಿ ಶಾಸಕ ಸತೀಶ್ ಜಾರಕಿಹೊಳಿ ಕೂಡ ಪ್ರತ್ಯೇಕವಾಗಿ ನಾಮ ಪತ್ರ ಸಲ್ಲಿಸಿದ್ದಾರೆ.

ಸೋದರರಿಬ್ಬರು ಕಣಕ್ಕೆ ಇಳಿದಿರೋದರಿಂದ ಗೋಕಾಕ್ ಕ್ಷೇತ್ರ ಹೈವೋಲ್ಟೇಜ್ ಕಣವಾಗಿದೆ.  ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಮತ್ತು ಜೆಡಿಎಸ್ ನಿಂದ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಸೋದರ ಲಖನ್ ಜಾರಕಿಹೊಳಿ ಜೊತೆ ಬಂದ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಒಂದು ವೇಳೆ ಲಖನ್ ಜಾರಕಿಹೊಳಿ ನಾಮಪತ್ರ ತಿರಸ್ಕೃತವಾದರೇ, ಸತೀಶ್ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ ರಚಿಸಿಕೊಂಡಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com