ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ನ ಕೆಲವರು ಕಾರಣ- ಹೆಚ್. ಡಿ. ದೇವೇಗೌಡ 

ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಕಾಂಗ್ರೆಸ್ ನ ಕೆಲ ಮುಖಂಡರು ಸಂಚು ನಡೆಸಿದ್ದು, ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಈ ಮುಖಂಡರೇ ಎಂದು  ಪರೋಕ್ಷವಾಗಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.
ಸಂಗ್ರಹ ಪೋಟೋ
ಸಂಗ್ರಹ ಪೋಟೋ
Updated on: 

ಬೆಂಗಳೂರು: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಕಾಂಗ್ರೆಸ್ ನ ಕೆಲ ಮುಖಂಡರು ಸಂಚು ನಡೆಸಿದ್ದು, ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಈ ಮುಖಂಡರೇ ಎಂದು  ಪರೋಕ್ಷವಾಗಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಸರ್ಕಾರ ಪತನಗೊಳಿಸಬೇಕು ಎಂದು ಮೊದಲೇ ನಿರ್ಧರಿಸಿದ್ದರು. ಇದಕ್ಕಾಗಿ ತಮ್ಮ ಶಾಸಕರನ್ನು ಮುಂಬೈಗೆ ಅವರೇ ಕಳುಹಿಸಿದ್ದರು. ಆದರೆ ಕಾಂಗ್ರೆಸ್ ಈ ಬಗ್ಗೆ ಮಾತನಾಡುವುದೇ ಇಲ್ಲ. ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಕೆಲ ಮುಖಂಡರು ಕಾರಣ‌ ಎಂದು ದೂರಿದರು.

ಮಹಾಲಕ್ಷ್ಮಿ ಲೇಔಟ್  ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಡಾ.ಗಿರೀಶ್ ನಾಶಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಭಿನ್ನಾಭಿಪ್ರಾಯಕ್ಕೆ ಆಸ್ಪದವಿಲ್ಲದಂತೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಪಕ್ಷದ ಗೆಲುವಿಗಾಗಿ ಎಲ್ಲರೂ ದುಡಿಯಬೇಕು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com