ನನ್ನ ಬಳಿ ಸಾಲ ತೆಗೆದುಕೊಳ್ಳುವಾಗ ಚೆನ್ನಾಗಿತ್ತು, ಈಗ ಟಗರು ಪೊಗರು ತೋರಿಸುತ್ತಿದೆ: ಎಂಟಿಬಿ

ಕಾಂಗ್ರೆಸ್ ನ ಕೆಲ ಹಿರಿಯ ನಾಯಕರೇ ನನ್ನ ಬಳಿ ಸಾಲ ತೆಗೆದುಕೊಂಡಿದ್ದರು ಎಂದು ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಸಿದ್ದರಾಮಯ್ಯ-ಎಂಟಿಬಿ ನಾಗರಾಜ್
ಸಿದ್ದರಾಮಯ್ಯ-ಎಂಟಿಬಿ ನಾಗರಾಜ್
Updated on: 

ಬೆಂಗಳೂರು: ಕಾಂಗ್ರೆಸ್ ನ ಕೆಲ ಹಿರಿಯ ನಾಯಕರೇ ನನ್ನ ಬಳಿ ಸಾಲ ತೆಗೆದುಕೊಂಡಿದ್ದರು ಎಂದು ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. 

ಹೊಸಕೋಟೆಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಎಂಟಿಬಿ ನಾಗರಾಜ್ ಅವರು ನಾನು ಯಾರ ಋಣದಲ್ಲಿ ಇಲ್ಲ. ನನ್ನ ಋಣದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಎಚ್ ಮುನಿಯಪ್ಪ, ನಂಜೇಗೌಡ ಮತ್ತು ನಾರಾಯಣಸ್ವಾಮಿ ಅವರು ನನ್ನಿಂದ ಹಣ ಪಡೆದಿದ್ದು ಇಂದಿಗೂ ವಾಪಸ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ. 

ಇನ್ನು ಮಾಜಿ ಸಚಿವ ಕೃಷ್ಣಬೈರೇಗೌಡ ಸಹ ಲೋಕಸಭೆ ಚುನಾವಣೆ ವೇಳೆ ನನ್ನ ಬಳಿ ಸಾಲ ತೆಗೆದುಕೊಂಡಿದ್ದು ನಂತರ ವಾಪಸ್ ಮಾಡಿದ್ದರು. ಬೈರೇಗೌಡರನ್ನು ಬಿಟ್ಟರೆ ಮತ್ಯಾರು ನನ್ನಗೆ ಹಣ ಹಿಂದಿರುಗಿಸಿಲ್ಲ. ಆದರೆ ಇಂದು ನನ್ನನ್ನು ಸೋಲಿಸಲು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನಾನು 1200 ಕೋಟಿಗೆ ಒಡೆಯ. ಈ ಎಲ್ಲಾ ಆಸ್ತಿಯನ್ನು ನ್ಯಾಯವಾಗಿ ಸಂಪಾದಿಸಿದ್ದು ನಾನು ಧರ್ಮಸ್ಥಳ ಮಂಜುನಾಥ ಸ್ವಾಮಿ ಭಕ್ತ. ಸುಳ್ಳು ಹೇಳುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com