ನಿಜವಾಗಿಯೂ ನಡೆದಿದ್ದು ಇದು: ಸಚಿವ ಮಾಧುಸ್ವಾಮಿ ಸ್ಪಷ್ಟನೆ 

ಕುರುಬ ಸಮುದಾಯದ ಶ್ರೀಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಅಗೌರವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. 
ಮಾಧುಸ್ವಾಮಿ
ಮಾಧುಸ್ವಾಮಿ

ಬೆಂಗಳೂರು: ಕುರುಬ ಸಮುದಾಯದ ಶ್ರೀಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಅಗೌರವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. 

ನಿಜವಾಗಿಯೂ ನಡೆದಿದ್ದು ಇದು, ಆದರೇ ಕೆಲವು ಕ್ಷುದ್ರ ಶಕ್ತಿಗಳು ಅಲ್ಲಿ ನಡೆದ ಘಟನೆಯನ್ನು ತಮಗೆ ಬೇಕಾದಂತೆ ತಿರುಚಿ, ನನ್ನ ಮೇಲೆ ವ್ಯವಸ್ಥಿತ ಷಡ್ಯಂತ್ರ ನಡೆಸಿದರು ಎಂದು ಕಾನೂನು ಸಚಿವ ಜೆ ಸಿ ಮಧುಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ನಿಲುವನ್ನು ನಾನು ಅಂದೇ ಸ್ಪಷ್ಟಪಡಿಸಿದ್ದರೂ, ವಿನಾಕಾರಣ ನನ್ನ ಮೇಲೆ ಆರೋಪಗಳ ಸುರಿಮಳೆ ಮಾಡಲಾಯಿತು. ನಡೆದ ಘಟನೆಯನ್ನು ಎಲ್ಲರಿಗೂ ತಲುಪಿಸಿ ಎಂದು ಮನವಿ ಮಾಡಿದ್ದಾರೆ.

ಕೆಲವೊಂದಿಷ್ಟು ಪಟ್ಟಭದ್ರ ಹಿತಾಸಕ್ತಿಗಳು ಚುನಾವಣಾ ಸಮಯ ವಾಗಿದ್ದರಿಂದ ಈ ತರನಾಗಿ ಸಮಾಜದಲ್ಲಿ ಒಡಕನ್ನು ಮೂಡಿಸುವ ಕೆಲಸ ಮಾಡುತ್ತಿವೆ, ಶ್ರೀ ಗಳೆ ಸ್ಪಷ್ಟ ಪಡಿಸಿದ್ದಾರೆ ನಾನು ಶ್ರೀ ಗಳಿಗೆ ಏಕಚನದಲ್ಲಿ ನಿಂದಿಸಿಲ್ಲವೆಂದು ಮತ್ಯಾವ ಸಾಕ್ಷಿ ಬೇಕು ಹೇಳಿ? ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com