ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಯೇ ಇಲ್ಲ: ಬಿ.ಎಸ್.ಯಡಿಯೂರಪ್ಪ

ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಲ್ಲ. ಈ ಬಾರಿ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ
Updated on: 

ಕಾರವಾರ: ನನ್ನ ಭವಿಷ್ಯವಾಣಿ ಎಂದಿಗೂ ತಪ್ಪಾಗಿಲ್ಲ. ಈ ಬಾರಿ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಯಲ್ಲಾಪುರದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ನಾನು ಹೇಳಿದ್ದಾಗ ವಿರೋಧ ಪಕ್ಷಗಳು ಈ ಕುರಿತು ಟೀಕೆ ಮಾಡಿದ್ದವು. ಆದರೆ, ನಾವು 26 ಸೀಟುಗಳಲ್ಲಿ ಗೆಲುವು ಸಾಧಿಸಿದ್ದೆವು. ಈ ಬಾರಿ 15 ಕ್ಷೇತ್ರಗಳಲ್ಲೂ ಬಿಜೆಪಿ ಸಾಧಿಸಲಿದೆ ಎಂದು ಹೇಳಿದ್ದಾರೆ. 

ಬಹುಮತಕ್ಕಾಗಿ ನಾವು ಪ್ರಚಾರ ನಡೆಸುತ್ತಿದ್ದೇವೆ. ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಲುವಾಗಿ ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ನಡೆಸುತ್ತಿದ್ದೇವೆ. ಈ ವರೆಗೂ ನನಗೆ ಸಾರ್ವಜನಿಕರು ಉತ್ತಮವಾಗಿಯೇ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಬಂಡಾಯ ಶಾಸಕರು ಕುರಿತು ಮಾತನಾಡಿರು ಅವರು, ಅವರಿಂದಲೇ ಇಂದು ನಾವು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಸಾಧ್ಯವಾಯಿತು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com