ಚುನಾವಣಾ ಪ್ರಚಾರದ ಅಖಾಡಕ್ಕೆ ನಟಿ ಹರಿಪ್ರಿಯಾ: ವಿವರ ಇಲ್ಲಿದೆ

ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು,ತಾರಾ ಮೆರುಗು ಪಡೆದುಕೊಳ್ಳುತ್ತಿದೆ. ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಇಂದು ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರವಾಗಿ ಪ್ರಚಾರ ನಡೆಸಿದರು.
ನಟಿ ಹರಿಪ್ರಿಯಾ
ನಟಿ ಹರಿಪ್ರಿಯಾ
Updated on: 

ಚಿಕ್ಕಬಳ್ಳಾಪುರ:  ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು,ತಾರಾ ಮೆರುಗು ಪಡೆದುಕೊಳ್ಳುತ್ತಿದೆ. ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಇಂದು ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರವಾಗಿ ಪ್ರಚಾರ ನಡೆಸಿದರು.

ಚಿಕ್ಕಬಳ್ಳಾಪುರದ ವಿವಿಧೆಡೆ ಪ್ರಚಾರ ನಡೆಸಿದ ಹರಿಪ್ರಿಯಾ ಅವರಿಗೆ ಮಹಿಳೆಯರು ಆರತಿ ಎತ್ತಿ ಅದ್ದೂರಿ ಸ್ವಾಗತ ನೀಡಿದರು.ಕೆಲವರು ಸ್ಟಾರ್ ನಟಿಯೊಂದಿಗೆ ಸೆಲ್ಫೀ ತೆಗೆದುಕೊಂಡು ಖುಷಿಪಟ್ಟರು. ಮನೆ ಮನೆಗಳಿಗೆ ತೆರಳಿದ ಹರಿಪ್ರಿಯಾ,  ಸುಧಾಕರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಹರಿಪ್ರಿಯಾ, ಹುಟ್ಟಿ ಬೆಳೆದಿರುವ ಚಿಕ್ಕಬಳ್ಳಾಪುರಕ್ಕೆ ಬಂದಿರುವುದಕ್ಕೆ ತುಂಬಾನೇ ಖುಷಿಯಾಗುತ್ತಿದೆ. ಮೊದಲ ಬಾರಿಗೆ ಪ್ರಚಾರಕ್ಕೆ ಬಂದಿದ್ದು, ಸುಧಾಕರ್ ಕೆಲಸದ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಮೆಡಿಕಲ್ ಕಾಲೇಜ್, ಕುಡಿಯುವ ನೀರು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡಿದ್ದು, ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಪ್ರಚಾರ ನಡೆಸುತ್ತಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com