ನಾನೇನು ತಪ್ಪು ಮಾಡಿದೆ? ಗಳಗಳನೆ ಕಣ್ಣೀರಿಟ್ಟ ಕುಮಾರಸ್ವಾಮಿ 

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೆ ಗಳಗಳನೇ ಕಣ್ಣೀರಿಟ್ಟ ಪ್ರಸಂಗ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ   ಜೆಡಿಎಸ್ ಸಮಾವೇಶದಲ್ಲಿ ನಡೆದಿದೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on: 

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೆ ಗಳಗಳನೇ ಕಣ್ಣೀರಿಟ್ಟ ಪ್ರಸಂಗ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ   ಜೆಡಿಎಸ್ ಸಮಾವೇಶದಲ್ಲಿ ನಡೆದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರನ ಹೀನಾಯ ಸೋಲನ್ನು ನೆನೆದು ಕಣ್ಣೀರಿಟ್ಟಿದ್ದಾರೆ.  ಜಿಲ್ಲೆಯ ಜನರನ್ನು ನಂಬಿದೆ. ಆದರೆ, ನೀವೆ ಕೈ ಬಿಟ್ರೆ ಹೆಂಗೆ, ನಾನೇನು ತಪ್ಪು ಮಾಡಿದೆ  ಎಂದು ನೆರೆದಿದ್ದ ಪಕ್ಷದ ಕಾರ್ಯಕರ್ತರ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಲು ನನಗೇನೂ ಆಸಕ್ತಿ ಇರಲಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನನ್ನಗೆ ಗಂಟು ಹಾಕಿದರು. ತಮ್ಮ ಅಧಿಕಾರವಧಿಯಲ್ಲಿ ಜಿಲ್ಲೆಯ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವುದಾಗಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, 2014 ಹಾಗೂ 2018  ರಲ್ಲಿ ದೇವೇಗೌಡರ ವಿರೋಧ ಕಟ್ಟಿಕೊಂಡು ನಾರಾಯಣಗೌಡನಿಗೆ ಟಿಕೆಟ್ ಕೊಟ್ಟೆ. ಆದರೆ, ಆತ ನಂಬಿಕೆಗೆ ದ್ರೋಹ ಬಗೆದಿದ್ದಾನೆ. 2019 ಫೆಬ್ರವರಿ 18 ರಂದು ಬೆಂಗಳೂರಿನಲ್ಲಿ ಕುಳಿತು ಬಜೆಟ್ ನಲ್ಲಿ ಮಂಡ್ಯ ಜಿಲ್ಲೆಗೆ ಘೋಷಿಸಬೇಕಾದ ಕಾರ್ಯಕ್ರಮಗಳ ಬಗ್ಗೆ ಚಿಂತಿಸುತ್ತಿದ್ದರೆ ಈ ಪುಣ್ಯಾತ್ಮ ಬಾಂಬೆ ಆಸ್ಪತ್ರೆಯಲ್ಲಿ ಲಾಕ್ ಆಗಿದ್ದ. ಕುಮಾರಣ್ಣ ಕ್ಷೇತ್ರದ ಅಭಿವೃದ್ದಿಗಾಗಿ ದುಡ್ಡು ಕೊಡುತ್ತಿರಲಿಲ್ಲ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದಾರವಾಗಿ ದುಡ್ಡು ಕೊಡುತ್ತಿದ್ದಾರೆ ಎಂದು ಪ್ರಚಾರ ಮಾಡುತ್ತಿದ್ದಾನೆ. ಎಲ್ಲವನ್ನು ದೇವರೇ ನೋಡಿಕೊಳ್ಳಲಿ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com